ಪುತ್ತೂರು: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ 6ನೇ ಆರೋಪಿ ಮೊಹಮ್ಮದ್ ಷರೀಫ್ (55) ನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ವಿದೇಶದಿಂದ ವಾಪಸ್ ಬರುವಾಗ ದೆಹಲಿ ಏರ್ಫೋರ್ಟ್ಲ್ಲಿ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ.
ಈತನ ಪತ್ತೆಗಾಗಿ ಎನ್ಐಎ ಅಧಿಕಾರಿಗಳು 5 ಲಕ್ಷ ರೂ. ರಿವಾರ್ಡ್ ಘೋಷಿಸಿದ್ದರು. ಈತ ಪ್ರವೀಣ್ ಕೊಲೆಗೆ ಸಂಚು ರೂಪಿಸುತ್ತಿದ್ದ ತಂಡದಲ್ಲಿದ್ದ. ಜೊತೆಗೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡನಾಗಿದ್ದ, ಎರಡು ಬಾರಿ ಎನ್ ಐಎ ಅಧಿಕಾರಿಗಳು ಶರೀಫ್ ಮನೆ ಮೇಲೆ ದಾಳಿ ಮಾಡಿದ್ದರು.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸಹಚರರ ಸ್ಥಳಗಳ ಮೇಲೆ ಇತ್ತೀಚೆಗೆ ಎನ್ಐಎ ದಾಳಿ ಮಾಡಿ ದಾಖಲೆಗಳು ಜಪ್ತಿ ಮಾಡಿಕೊಂಡಿತ್ತು. ಕರ್ನಾಟಕ ಸೇರಿ ತಮಿಳುನಾಡಿನ 16 ಕಡೆ ಎನ್ಐಎ ಅಧಿಕಾರಿಗಳು ದಾಳಿ ಮಾಡಿದ್ದರು.
ಜುಲೈ 26, 2022 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ರಾಜ್ಯವನ್ನು ಬೆಚ್ಚಿ ಬೀಳಿಸಿತ್ತು. ಮಹಮ್ಮದ್ ಶರೀಫ್ ಸೇರಿದಂತೆ ಈ ವರೆಗೆ 20 ಜನರನ್ನು ಬಂಧಿಸಲಾಗಿದೆ.