ಪುತ್ತೂರು: ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ಗೋಳ್ತಮಜಲು ಗ್ರಾಮದ ನಿವಾಸಿ ಸರಸ್ವತಿ ಎಂಬವರ ಬ್ಯಾಗಿನಿಂದ ಚಿನ್ನಾಭರಣಗಳನ್ನು ಡಿ.19ರಂದು ಅಪರಿಚಿತರು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 120/2024 ಕಲಂ: 303(2) ಬಿಎನ್ಎಸ್ ರಂತೆ ಪ್ರಕರಣ ದಾಖಲಿಸಲಾಗಿತ್ತು, ಪ್ರಕರಣ ಪ್ರಕಾರ ತನಿಖೆ ನಡೆಸಲಾಗಿ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿತೆಯರಾದ ರಾಜಾಜಿನಗರ ಬೆಂಗಳೂರು ನಿವಾಸಿಗಳಾದ ಜ್ಯೋತಿ ಹಾಗೂ ಯಶೋದರವರನ್ನು ದಸ್ತಗಿರಿ ಮಾಡಿ, ಅವರಿಂದ ಕಳವಾದ ರೂ 25,000/- ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಮತ್ತೊಂದು ಪ್ರಕರಣವಾದ ಪುತ್ತೂರು ಪೇಟೆಯ ಕೋರ್ಟ್ ರಸ್ತೆಯಲ್ಲಿರುವ ಜ್ಯುವೆಲ್ಲರ್ಸ್ ಶಾಪ್ ನಲ್ಲಿ ಚಿನ್ನ ಖರೀದಿ ಮಾಡುವಾಗೆ ನಟಿಸಿ, ರೂ 77000 /- ಮೌಲ್ಯದ 09 ಗ್ರಾಂ ತೂಕದ 03 ಚಿನ್ನದ ಉಂಗುರಗಳನ್ನು ಕಳವು ಮಾಡಿಕೊಂಡ ಘಟನೆ ಡಿ.13 ರಂದು ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಡಿ 19 ರಂದು ಜ್ಯುವೆಲ್ಲರ್ಸ್ ಮಾಲಕರಾದ ಶಿವಪ್ರಸಾದ್ ಭಟ್ ರವರು ನೀಡಿದ ದೂರಿನ ಮೇರೆಗೆ, ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 121/2024 ಕಲಂ: 305 ಬಿಎನ್ಎನ್ ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗಿದೆ. ಆರೋಪಿತ ನೀರುಮಾರ್ಗ ಮಂಗಳೂರು ನಿವಾಸಿ ವಿದ್ಯಾ ಎಂಬವರನ್ನು ದಸ್ತಗಿರಿ ಮಾಡಿ, ಕಳವಾದ ಒಟ್ಟು ರೂ 77000/- ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಳ್ಳಲಾಗಿದೆ.