ಪುತ್ತೂರು: ಎಲೆಕ್ಟ್ರಿಕ್ ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ರಸ್ತೆಯ ತೆಂಕಿಲ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಬೊಳ್ಳಾರ್ ನಿವಾಸಿ ಸೂರ್ಯ ಮೃತಪಟ್ಟ ಆಟೋ ಚಾಲಕ.
ಇಂದು ಮುಂಜಾನೆ ಬೈಪಾಸ್ ರಸ್ತೆಯಲ್ಲಿ ತೆರಳುತ್ತಿದ್ದ ವೇಳೆ ನಾಯಿ ಅಡ್ಡ ಬಂದು ಆಟೋ ಪಲ್ಟಿಯಾಗಿದೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ಅವರನ್ನು ವುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.