ಬೆಂಗಳೂರು: ಕ್ರಿಸ್ಮಸ್ ಹಬ್ಬ ಮತ್ತು ವರ್ಷಾಂತ್ಯದ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸುವ ಸಲುವಾಗಿ ನೈಋತ್ಯ ರೈಲ್ವೆ ಬೆಂಗಳೂರು-ಮಂಗಳೂರು ಮಧ್ಯೆ ವಿಶೇಷ ರೈಲು ಓಡಿಸಲು ನಿರ್ಧರಿಸಿದೆ. ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಈ ರೈಲು ಹೊರಡಲಿದೆ.
ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ರೈಲು ಡಿಸೆಂಬರ್ 23 ಮತ್ತು 27 ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ಇದೇ ರೈಲು (06506) ಡಿಸೆಂಬರ್ 24 ಮತ್ತು 28ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಅದೇ ದಿನ ರಾತ್ರಿ 10.30ಕ್ಕೆ ಯಶವಂತಪುರ ತಲುಪಲಿದೆ.
ಈ ರೈಲಿಗೆ ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಯಿದೆ.
ಈ ರೈಲಿನ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಪ್ರಯಾಣಿಕರು ಭಾರತೀಯ ರೈಲ್ವೆಯ ಜಾಲತಾಣ www.enquiry.indianrail.gov.inಗೆ ಭೇಟಿ ನೀಡಬಹುದು ಅಥವಾ ಸಹಾಯವಾಣಿ 139 ನಂಬರ್ಗೆ ಕರೆ ಮೂಲಕ ಮಾಹಿತಿ ಪಡೆದುಕೊಳ್ಳಬಹುದು.