ಡಿ.28-29 : ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ | ಕಾರ್ಯಕರ್ತರ ಮಹಾಸಭೆ

ಪುತ್ತೂರು : ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ  ಮುಂಭಾಗ ಡಿ.28 – 29 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ ಕಾರ್ಯಕ್ರಮಕ್ಕೆ ಆನ್ ಲೈನ್ ನಲ್ಲಿ ನೊಂದಾಯಿತ ಕಾರ್ಯಕರ್ತರ ಮಹಾಸಭೆ ಭಾನುವಾರ ಸಂಜೆ ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಸಭೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಸಂಚಾಲಕ ಅರುಣ್  ಕುಮಾರ್ ಪುತ್ತಿಲ ಮಾತನಾಡಿ, ಈ  ಬಾರಿ ಕಾರ್ಯಕ್ರಮಕ್ಕೆ ಭಾರಿ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸುವ ನಿರೀಕ್ಷೆ ಇದ್ದು ಕಾರ್ಯಕ್ರಮದ ಅಚ್ಚುಕಟ್ಟಾದ ನಿರ್ವಹಣೆಗೆ ಕಾರ್ಯಕರ್ತರ ಪಾತ್ರ ಮಹತ್ವದ್ದಾಗಿದೆ. ಯಾವುದೇ ಸೂಚನೆ ನೀಡದೆ ಬೆಳಗ್ಗಿನ ಜಾವದವರೆಗೆ ಕಾರ್ಯಕರ್ತರು ಪೇಟೆ ಶೃಂಗಾರದಲ್ಲಿ ಕಾರ್ಯಲಯದಲ್ಲಿ ಕಾರ್ಯಕರ್ತರು ಸೇವೆ ಸಲ್ಲಿಸುತ್ತಿದ್ದು, ಅವರಿಗೆ ಧನ್ಯವಾದ ಸಲ್ಲಿಸಿದರು.

ಸಮಿತಿ ಗೌರವಾಧ್ಯಕ್ಷ ಗೋಪಾಲಕೃಷ್ಣ ಭಟ್ ಸಲಹೆ ಸೂಚನೆ ನೀಡಿದರು. ಈ ಸಂದರ್ಭದಲ್ಲಿ ವಿವಿಧ ವಿಭಾಗದ ಕಾರ್ಯಕರ್ತರಿಗೆ ಜವಬ್ದಾರಿ ವಹಿಸಲಾಯಿತು.































 
 

ಸಭೆಯಲ್ಲಿ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಇಜ್ಜಾವು, ಗೌರವಾಧ್ಯಕ್ಷ ಚಂದಪ್ಪ ಮೂಲ್ಯ, ಪ್ರಮುಖರಾದ ಉಮೇಶ್ ಕೋಡಿಬೈಲು, ಸುನೀಲ್ ಬೋರ್ಕರ್, ಮನೀಶ್ ಕುಲಾಲ್,  ಸುಜಿತ್ ಕಜೆ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ರೈ ಕೆದಂಬಾಡಿಮಠ ಸ್ವಾಗತಿಸಿ, ವಂದಿಸಿದರು. ಸಭೆಯಲ್ಲಿ ವಿವಿಧ ವಿಭಾಗದ 200 ರಷ್ಟು ಕಾರ್ಯಕರ್ತರು ಭಾಗವಹಿಸಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top