ಶಿರಾಡಿ ಘಾಟಿ ಸುರಂಗ ಮಾರ್ಗದ ಡಿಪಿಆರ್‌ಗೆ ಕೇಂದ್ರ ಒಪ್ಪಿಗೆ

3.8 ಕಿಲೋಮೀಟರ್ ಸುರಂಗ ಮಾರ್ಗ, 10 ಕಿ.ಮೀ ವಯಡಕ್ಟ್‌ ನಿರ್ಮಿಸುವ ಯೋಜನೆ

ಹೊಸದಿಲ್ಲಿ: ಮಂಗಳೂರು-ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್‌ನಲ್ಲಿ ಸುರಂಗ, ಗ್ರೀನ್‌ಫೀಲ್ಡ್ ಮಾರ್ಗ ನಿರ್ಮಾಣ ಸಂಬಂಧ ಸಮಗ್ರ ಯೋಜನಾ ವರದಿ (ಡಿಪಿಆರ್‌) ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಸುರಂಗ ನಿರ್ಮಾಣಕ್ಕೆ ಭಾರಿ ಮೊತ್ತ ಬೇಕಾಗುತ್ತದೆ. ಜೊತೆಗೆ ಇದು ಕಾರ್ಯಸಾಧು ಅಲ್ಲ ಎಂದು 2022ರಲ್ಲಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ಉತ್ತರ ನೀಡಿದ್ದರು. ಆದರೆ ಸುರಂಗ ನಿರ್ಮಾಣಕ್ಕೆ ಒಪ್ಪಿಗೆ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ 3 ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿತ್ತು.

ಈ ಮನವಿಯ ಹಿನ್ನೆಲೆಯಲ್ಲಿ ಡಿಪಿಆರ್ ತಯಾರಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಒಟ್ಟು 30 ಕಿಲೋಮೀಟರ್ ಉದ್ದದ ಯೋಜನೆ ಇದಾಗಿದ್ದು 3.8 ಕಿಲೋಮೀಟರ್ ಸುರಂಗ ಇದ್ದರೆ, 10 ಕಿ.ಮೀ ವಯಡಕ್ಟ್‌ ಇರಲಿದೆ. ಮಾರೇನಹಳ್ಳಿಯಿಂದ ಪ್ರಾರಂಭವಾಗಿ ಅಡ್ಡಹೊಳೆಯವರೆಗೆ ಸುರಂಗ ಮಾರ್ಗ ನಿರ್ಮಾಣವಾಗಲಿದೆ. ಇಲ್ಲಿ ಬಹಳಷ್ಟು ಅರಣ್ಯಕ್ಕೆ ಸಂಬಂಧಿಸಿದ ಸಮಸ್ಯೆಗಳಿರುವ ಹಿನ್ನೆಲೆಯಲ್ಲಿ ವಿವರವಾದ ಅಂದಾಜು ಮಾಡಬೇಕಿದೆ ಎಂದು ಹಿಂದೆ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದರು.































 
 

ಕರ್ನಾಟಕ ಸರ್ಕಾರ ಅರಣ್ಯ ಭೂಮಿ ನೀಡಲು ಸಿದ್ಧವಿದ್ದರೆ ಶಿರಾಡಿ ಘಾಟ್‌ ರಸ್ತೆಯನ್ನು ಅಭಿವೃದ್ಧಿಪಡಿಸಲು ಕೆಲವು ಸಾವಿರ ಕೋಟಿಗಳನ್ನು ಹೂಡಿಕೆ ಮಾಡುವ ಪ್ರಸ್ತಾವವನ್ನು ಹೆದ್ದಾರಿ ಇಲಾಖೆ ಪರಿಗಣಿಸಲಿದೆ ಎಂದು ಕೇಂದ್ರ ಭೂಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಭರವಸೆ ನೀಡಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top