ಬಂಟ್ವಾಳ : ತಾಲೂಕಿನ ಸಜೀಪಮುನ್ನೂರಿನ ಗಾಂಧಿನಗರ ಕ್ರಾಸ್ ನಲ್ಲಿ ಎರಡು ಸ್ಕೂಟರ್ಗಳ ನಡುವೆ ಅಪಘಾತವಾದಾಗ ಒಂದು ಸ್ಕೂಟರಿನಲ್ಲಿ ಅಕ್ರಮ ಗೋಮಾಂಸ ಸಾಗಾಟ ಪತ್ತೆಯಾದ ಘಟನೆ ಡಿ. 24ರಂದು ನಡೆದಿದೆ.
ಸ್ಕೂಟರ್ ಸವಾರನ ವಿರುದ್ಧ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಾಂಧಿನಗರ ಕ್ರಾಸ್ ಬಳಿ ಸಜೀಪ ಕಡೆಯಿಂದ ಬರುತ್ತಿದ್ದ ಆರೋಪಿ ಸವಾರ ಸ್ಕೂಟರನ್ನು ಅತಿ ವೇಗ, ಹಾಗೂ ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಸಜೀಪಮುನ್ನೂರು ದಾನರಗುಡ್ಡೆ ನಿವಾಸಿ ಸ್ಕೂಟರ್ ಸವಾರ ಅನುರಾದ ಕೆ. ಅವರು ಡಿ. 24ರಂದು ಬೆಳಗ್ಗೆ ಕೆಲಸಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಗಾಂಧಿನಗರ ಕ್ರಾಸ್ ಬಳಿ ಅವರ ಸ್ಕೂಟರಿಗೆ ಡಿಕ್ಕಿ ಹೊಡೆದಿದ್ದಾನೆ.
ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಕೂಟರ್ ಸವಾರರು ರಸ್ತೆಗೆ ಉರುಳಿ ಗಾಯವಾಗಿದೆ. ಈ ವೇಳೆ ಆರೋಪಿಯ ಸ್ಕೂಟರ್ ನಲ್ಲಿದ್ದ ಗೋಮಾಂಸದ ಕಟ್ಟು ರಸ್ತೆಗೆ ಬಿದ್ದಿದೆ ಎನ್ನಲಾಗಿದೆ.
ಗೋಮಾಂಸದ ಕಟ್ಟು ರಸ್ತೆಗೆ ಬಿದ್ದಿದೆ ಎಂದು ತಿಳಿದು, ಆರೋಪಿ ಪರಾರಿಯಾಗಿದ್ದಾನೆ. ಆರೋಪಿಯ ಪತ್ತೆ ಇನ್ನೂ ತಿಳಿದು ಬಂದಿಲ್ಲ. ಆರೋಪಿ ಎಲ್ಲಿಯೋ ಇದ್ದ ದನವನ್ನು ಹತ್ಯೆ ಮಾಡಿ ಮಾಂಸವನ್ನು ಮಾರಾಟ ಮಾಡಲು ಸಜೀಪ ಕಡೆಯಿಂದ ಮೆಲ್ಕಾರ್ ಕಡೆಗೆ ಸಾಗಿಸಲು ಅಜಾಗರೂಕತೆಯಿಂದ ಸ್ಕೂಟಿಯನ್ನು ಚಲಾಯಿಸುತ್ತಿದ್ದನು. ಎಂದು ದೂರಿನಲ್ಲಿ ವಿವರಿಸಲಾಗಿದೆ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.