ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದು, ವಿಧಾನ ಸಭಾ ಕ್ಷೇತ್ರದಲ್ಲಿ ಮತ್ತೊಂದು ಗಲಭೆಗೆ ಕಾರಣೀಯವಾಗಿದೆ.
ಮೊಟ್ಟೆ ಎಸೆಯುವ ದೃಶ್ಯ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಸಿಸಿ ಟಿವಿ ಸಾಕ್ಷ್ಯಾಧಾರದಲ್ಲಿ ಮೊಟ್ಟೆ ಎಸೆದ ಆರೋಪಿ ಪೊಲೀಸರು ಕೈ ವಶವಾಗಿದ್ದಾನೆ.
ಮುನಿರತ್ನ ಅವರು ಸುಶಾಸನ ದಿನಾಚರಣೆ ಕಾರ್ಯಕ್ರಮಕ್ಕೆ ಬಂದಿದ್ದಾಗ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದು ಪ್ರತಿಭಟನೆಯನ್ನು ಬೆಂಗಳೂರಿನ ಕಂಠೀರವ ಸ್ಟುಡಿಯೋ ಬಳಿ ನಡೆಸಿದ್ದಾರೆ.
ಮುನಿರತ್ನ ಅವರು ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್ ಕಾರ್ಯಕರ್ತರು ಕಾರಿನತ್ತ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಹಿನ್ನಲೆ ಬಿಜೆಪಿ ಕಾರ್ಯಕರ್ತರು ತೀವ್ರವಾಗಿ ಕಾಂಗ್ರೆಸ್ ಕಾರ್ಯಕರ್ತರನ್ನು ವಿರೋಧಕ್ಕೆ ದಾರಿಯಾಗಿದೆ.
ಎರಡು ಪಕ್ಷದ ಕಾರ್ಯಕರ್ತರು ಗಲಾಟೆ ನಡೆಸುತ್ತಿದ್ದ ಸಂದರ್ಭದಲ್ಲಿಯೇ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನ ಅವರು ತಮ್ಮ ಮೇಲಿನ ಹಲ್ಲೆ ಖಂಡಿಸಿ ಕಂಠೀರವ ಸ್ಟುಡಿಯೋ ಬಳಿ ಪ್ರತಿಭಟನೆಗ ಮಾಡಿ ಆಕ್ರೋಶವನ್ನು ವ್ಯಕ್ತ ಪಡಿಸಿದ್ದಾರೆ.