ಸೇನಾ ವಾಹನ ಕಮರಿಗೆ ಉರುಳಿದ ಆಘಾತಕಾರಿ ಘಟನೆ | ಹುತಾತ್ಮರಾದ ಐವರು ಯೋಧರಲ್ಲಿ ಮೂವರು ಕನ್ನಡಿಗರು

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಪೂಂಛ್‌ ಜಿಲ್ಲೆಯಲ್ಲಿ ನಿನ್ನೆ ಸಂಜೆ ಸೇನಾ ವಾಹನ 300 ಅಡಿ ಆಳದ ಕಂದಕಕ್ಕೆ ಉರುಳಿ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ  ಐವರು ಸೈನಿಕರಲ್ಲಿ ಮೂವರು ಕನ್ನಡಿಗರೆಂದು ತಿಳಿದು ಬಂದಿದೆ.

ಸೇನಾ ವಾಹನಲ್ಲಿ 18 ಯೋಧರು ಪ್ರಯಾಣಿಸುತ್ತಿದ್ದು, ಇವರಲ್ಲಿ 5 ಮಂದಿ ಹುತಾತ್ಮರಾಗಿದ್ದಾರೆ. ಉಳಿದವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಪಘಾತದಲ್ಲಿ  ಮೃತಪಟ್ಟ ಯೋಧ ಕರ್ನಾಟಕ ಮೂಲದ ಉಡುಪಿ ಜಿಲ್ಲೆ ಕುಂದಾಪುರ ತಾಲೂಕು ಬಿಜಾಡಿಯ ಯೋಧ ಅನೂಪ್ , ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ಗ್ರಾಮದ ದಯಾನಂದ್, ಬಾಗಲಕೋಟೆ ಮೂಲದ ಯೋಧ ಮಹೇಶ್ ನಾಗಪ್ಪ ಮಾರಿಗೊಂಡ ಹುತಾತ್ಮರಾಗಿದ್ದಾರೆ.































 
 

ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಸೇನಾಧಿಕಾರಿಗಳು ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top