ಹೊಸದಿಲ್ಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸ್ಮಾರಕ ನಿರ್ಮಾಣಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.
ಕ್ಯಾಬಿನೆಟ್ ಸಭೆಯಲ್ಲಿ ಸ್ಮಾರಕಕ್ಕೆ ಜಾಗ ನೀಡಲು ಒಪ್ಪಿಗೆ ಸೂಚಿಸಲಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಿಂದ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ. ಇದನ್ನೂ
ಮನಮೋಹನ್ ಸಿಂಗ್ ನಿಧನ ಹಿನ್ನೆಲೆ ಶುಕ್ರವಾರ ಎಐಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಭೆಯಲ್ಲಿ ಸಿಂಗ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ದಿಲ್ಲಿಯಲ್ಲಿ ಮನಮೋಹನ್ ಸಿಂಗ್ ಸ್ಮಾರಕ ನಿರ್ಮಾಣಕ್ಕೆ ಸ್ಥಳಾವಕಾಶ ಕೋರಲು ನಿರ್ಧರಿಸಲಾಗಿತ್ತು.
ಅದರಂತೆ ಸ್ಮಾರಕಕ್ಕೆ ಸ್ಥಳ ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸರ್ಕಾರಕ್ಕೆ ಪತ್ರ ಬರೆದಿದ್ದರು. ಪತ್ರಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಕೇಂದ್ರ ಸರ್ಕಾರ ಸ್ಮಾರಕ ನಿರ್ಮಾಣಕ್ಕೆ ಒಪ್ಪಿಗೆ ಸೂಚಿಸಿದೆ. ವಯೋಸಹಜ ಅನಾರೋಗ್ಯ ಕಾರಣದಿಂದ ಕೊನೆಯುಸಿರೆಳೆದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತಿಮ ಸಂಸ್ಕಾರ ಇಂದು ನಡೆಯಲಿದೆ. ದೆಹಲಿಯಲ್ಲಿರುವ ನಿಗಮ್ ಬೋಧ್ ಘಾಟ್‌ನಲ್ಲಿ ಬೆಳಗ್ಗೆ 11:45ಕ್ಕೆ ಅವರ ಅಂತ್ಯಕ್ರಿಯೆ ನಡೆಯಲಿದೆ.