ಪುತ್ತೂರು : ಒಕ್ಕಲಿಗ ಸ್ವ-ಸಹಾಯ ಟ್ರಸ್ಟ್ (ರಿ) ಪುತ್ತೂರು ಇದರ ದಶಮಾನೋತ್ಸವದ ವತಿಯಿಂದ ಹಿರೇಬಂಡಾಡಿ ಗ್ರಾಮದ ಮಾದರಿ ದಂಪತಿಗಳ ಸನ್ಮಾನ ಸಮಾರಂಭದ ಸಮಾರೋಪ ಕಾರ್ಯಕ್ರಮವು ಮಾಜಿ ಶಾಸಕ ಸಂಜೀವ ಮಠಂದೂರು ಅವರ ಮನೆಯಲ್ಲಿ ನಡೆದಿದೆ.
ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಮಾತನಾಡಿ, 50 ವರ್ಷ ದಾಂಪತ್ಯ ಜೀವನ ನಡೆಸಿದ ಹಿರಿಯರನ್ನು ಗೌರವಿಸುವುದು ಇಡೀ ಸಮಾಜಕ್ಕೆ ಮಾದರಿಯಾಗಿದೆ. ಹಿರೇಬಂಡಾಡಿ ಗ್ರಾಮದಲ್ಲಿ ಹಲವು ಮಂದಿ ಹಿರಿಯರು, ಗೌಡ ಸಮುದಾಯಕ್ಕೋಸ್ಕರ ಹಾಗೂ ಮಾಗಣೆ ಊರ ಗೌಡರಾಗಿ ಕೆಲಸ ನಿರ್ವಹಿಸಿ, ನಮ್ಮ ಸಮಾಜದ ಸಂಸ್ಕೃತಿಯನ್ನು ಬೆಳೆಸಿ ಉಳಿಸುವಲ್ಲಿ ಮಹತ್ವದ ಕೆಲಸವನ್ನು ನಿರ್ವಹಿಸಿರುತ್ತಾರೆ. ಮುಂದಿನ ದಿನಗಳಲ್ಲಿ ಮದುವೆಯಾಗಿ ಒಂದು ವರ್ಷ ಪೂರೈಸಿದವರಿಗೆ ಸನ್ಮಾನ ಕಾರ್ಯಕ್ರಮಗಳನ್ನು ಇಟ್ಟುಕೊಂಡು ಮುಂದಕ್ಕೆ ಸಮಾಜದ ಅಭಿವೃದ್ದಿಗೆ ಕೆಲಸ ಮಾಡುವಂತಾಗಬೇಕು. ಹಿರಿಯರಿಗೆ ಗೌರವಿಸುವುದು ಒಂದು ಪುಣ್ಯದ ಕೆಲಸವಾಗಿದೆ. ಮುಂದಿನ ದಿನಗಳಲ್ಲಿ ಸಮಾಜವನ್ನು ಗಟ್ಟಿಗೊಳಿಸುವ ಕಾರ್ಯವನ್ನು ನಾವೆಲ್ಲರು ಮಾಡಬೇಕಾಗಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪುತ್ತೂರು ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ, ಒಕ್ಕಲಿಗ ಗೌಡ ಸ್ವ-ಸಹಾಯ ಟ್ರಸ್ಟ್ ಅಧ್ಯಕ್ಷ ಡಿ.ವಿ ಮನೋಹರ್, ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಚಿದಾನಂದ ಬೈಲಾಡಿ, ಒಕ್ಕಲಿಗ ಟ್ರಸ್ಟ್ ನ ಸ್ಥಾಪಕಧ್ಯಕ್ಷ ಎ.ವಿ. ನಾರಾಯಣ, ದಶಮಾನೋತ್ಸವ ಸಮಿತಿ ಅಧ್ಯಕ್ಷ ಪಟೇಲ್ ಗೋಪಾಲಕೃಷ್ಣ ಚಾರ್ವಕ, ಒಕ್ಕಲಿಗ ಸಂಘದ ಮಾಜಿ ಅಧ್ಯಕ್ಷರಾದ ವಿಶ್ವನಾಥ ಕೆಯ್ಯೂರು, ನಾಗಪ್ಪ ಗೌಡ ಬೊಮ್ಮೆಟ್ಟಿ, ಒಕ್ಕಲಿಗ ಗೌಡ ಸೇವಾ ಟ್ರಸ್ಟ್ ನ ಉಪಾಧ್ಯಕ್ಷ ಪ್ರವೀಣ್್ಿ ಕುಂಟ್ಯಾನ, ಒಕ್ಕಲಿಗ ಸೇವಾ ಟ್ರಸ್ಟ್ ನ ನಿರ್ದೇಶಕರಾದ ಆನಂದ ಮೂವಪ್ಪ, ಸಲಹಾ ಸಮಿತಿ ಸದಸ್ಯರಾದ ಜಿನ್ನಪ್ಪ ಗೌಡ ಮಳುವೇಲು, ಶ್ರೀಧರ್ ಗೌಡ ಕಣಜಾಲು, ವಿವಾಹ ವೇದಿಕೆ ಸಂಚಾಲಕರಾದ ಸುರೇಶ್ ಗೌಡ ಕಲ್ಲಾರೆ. ಒಕ್ಕಲಿಗ ಸಮುದಾಯ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣ ಅಧಿಕಾರಿ ಸುಧಾಕರ್ ಹಾಗೂ ಒಕ್ಕಲಿಗ ಗೌಡ ಗ್ರಾಮ ಸಮಿತಿ ಹಿರೇಬಂಡಾಡಿ, ಒಕ್ಕಲಿಗ ಗೌಡ ಮಹಿಳಾ ಘಟಕ ಹಿರೇಬಂಡಾಡಿ, ಒಕ್ಕಲಿಗ ಗೌಡ ಯುವ ಸಂಘ ಹಿರೇಬಂಡಾಡಿ, ಒಕ್ಕಲಿಗ ಸ್ವ-ಸಹಾಯ ಸಂಘಗಳ ಒಕ್ಕೂಟ ಹಿರೇಬಂಡಾಡಿ ಇದರ ಎಲ್ಲಾ ಅಧ್ಯಕ್ಷರು, ಪದಾಧಿಕಾರಿಗಳು, ಹಲವು ಗಣ್ಯರು ಉಪಸ್ಥಿತರಿದ್ದರು.