ಸಿಲಿಂಡರ್‌ ಸ್ಫೋಟ : ಇನ್ನೋರ್ವ ಅಯ್ಯಪ್ಪ ವ್ರತಧಾರಿ ಸಾವು

ಹುಬ್ಬಳ್ಳಿ: ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಾಗಿದ್ದ ಮತ್ತೋರ್ವ ಅಯ್ಯಪ್ಪ ವ್ರತಧಾರಿ ಸಾವನ್ನಪ್ಪುವುದರೊಂದಿಗೆ ಈ ಅವಘಡದಲ್ಲಿ ಮಡಿದವರ ಸಂಖ್ಯೆ ಐದಕ್ಕೇರಿದೆ. ಶಂಕರ್ ಚವ್ಹಾಣ್ ​(29) ಮೃತ ಅಯ್ಯಪ್ಪ ವ್ರತಧಾರಿ. ನಾಲ್ವರಿಗೆ ಚಿಕಿತ್ಸೆ ಮುಂದುವರಿದಿದ್ದು, ಅವರು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.
ಶಂಕರ್ ಚವ್ಹಾಣ್ ಮೊದಲ ಬಾರಿ ಅಯ್ಯಪ್ಪ ಮಾಲೆ ಧರಿಸಿದ್ದರು. ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಡಿಸೆಂಬರ್​ 22ರಂದು ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ 9 ಅಯ್ಯಪ್ಪ ವ್ರತಧಾರಿಗಳು ತೀವ್ರವಾಗಿ ಗಾಯಗೊಂಡಿದ್ದರು. ಶಂಕರ್​ ಚವ್ಹಾಣ್​ಗೆ ಕಳೆದ ಏಳು ದಿನಗಳಿಂದ ಕಿಮ್ಸ್​​ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಶಂಕರ್​ ಚವ್ಹಾಣ್​ ಶನಿವಾರ ಮಧ್ಯರಾತ್ರಿ ​ಕೊನೆಯುಸಿರೆಳೆದಿದ್ದಾರೆ.
ಸಾಯಿನಗರದ ಅಚ್ಚವ್ವಳ ಕಾಲೋನಿಯಲ್ಲಿ ಕಳೆದ ಭಾನುವಾರ ರಾತ್ರಿ ಸಂಭವಿಸಿದ್ದ ಸಿಲಿಂಡರ್ ಸ್ಫೋಟದಲ್ಲಿ ಒಟ್ಟು 9 ಮಂದಿ ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top