ಬಿಜೆಪಿಯವರು ಎಷ್ಟೇ ಚೀರಾಡಿದರು ರಾಜೀನಾಮೆ ಕೊಡಲ್ಲ : ಪ್ರಿಯಾಂಕ್‌ ಖರ್ಗೆ

ಗುತ್ತಿಗೆದಾರ ಸಚಿನ್‌ ಪಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಇಲ್ಲ ಎಂದು ವಾದ

ಬೆಂಗಳೂರು: ಬಿಜೆಪಿಯವರು ಎಷ್ಟೇ ಚೀರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಚಿನ್‌ ಪಂಚಾಳ್‌ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ನಾನು ಪತ್ರ ಬರೆದಿದ್ದೆ. ಸಿಎಂ ಮತ್ತು ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿ ಮನವಿ ಮಾಡಿದ್ದೆ. ಇದರಂತೆ ಈಗ ಗೃಹ ಸಚಿವರು ಸಿಐಡಿ ತನಿಖೆಗೆ ಆದೇಶ ಮಾಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿಯವರಿಗೆ ಸಿಬಿಐ ಮೇಲೆ ಪ್ರೀತಿ ಜಾಸ್ತಿ. ಹೀಗಾಗಿ ಸಿಬಿಐ ತನಿಖೆಗೆ ಕೇಳುತ್ತಾರೆ. ವರ್ಷಗಳ ಹಿಂದೆ ಬಿಜೆಪಿ ಕೈಯಲ್ಲಿ ಎಲ್ಲ ಸಂಸ್ಥೆಗಳು ಇತ್ತು ಏನು ಮಾಡಿದರು? ಬಿಜೆಪಿಯವರು ಯಾರದ್ದೋ ತಲೆದಂಡ ಆಗುತ್ತೆ ಅಂತ ಕಾಯ್ತಾ ಇದ್ದಾರೆ. ಯಾವುದೇ ಕಾರಣಕ್ಕೂ ಯಾರ ತಲೆತಂಡ ಆಗುವುದಿಲ್ಲ ಎಂದು ಬಿಜೆಪಿ ನಾಯಕರ ವಿರುದ್ದ ವಾಗ್ದಾಳಿ ನಡೆಸಿದರು.































 
 

ಕಲಬುರಗಿಗೆ ಮುತ್ತಿಗೆ ಹಾಕೋ ಎಚ್ಚರಿಕೆ ಕೊಟ್ಟಿರುವ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಖರ್ಗೆ, ಕಲಬುರಗಿಗೆ ಮುತ್ತಿಗೆ ಹಾಕಲಿ ಯಾರು ಬೇಡ ಎಂದಿದ್ದಾರೆ. ನನ್ನ ವಿರುದ್ದ ಏನಾದರೂ ದಾಖಲಾತಿ ಇದ್ದರೆ ತಂದು ಕೊಡಿ. ನಿಮಗೆ ನಾಚಿಕೆ ಆಗಬೇಕು. ಯಾಕೆ ಕಲಬುರಗಿಗೆ ಮುತ್ತಿಗೆ ಹಾಕ್ತಾರೆ ಎಂದು ಪ್ರಶ್ನಿಸಿದರು.
ಬಿಜೆಪಿ ನಾಯಕರನ್ನು ಮಾಧ್ಯಮಗಳು ಯಾಕೆ ಅಷ್ಟು ಸಿರಿಯಸ್ ಆಗಿ ತೆಗೆದುಕೊಂಡಿದ್ದೀರಿ? ಹೈಕಮಾಂಡ್ ನಾಯಕರೇ ರಾಜ್ಯ ಬಿಜೆಪಿ ನಾಯಕರನ್ನ ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಯಡಿಯೂರಪ್ಪ ಪೋಕ್ಸೊ ಪ್ರಕರಣಕ್ಕೆ ನೋಟಿಸ್‌ ಕೊಟ್ರಾ? ಮುನಿರತ್ನ ಕೇಸ್‌ನಲ್ಲಿ ಹೈಕಮಾಂಡ್ ನಾಯಕರು ಏನು ಕ್ರಮ ತೆಗೆದುಕೊಂಡಿದ್ದಾರೆ? ಯತ್ನಾಳ್ ವಿರುದ್ಧ ಏನು ಕ್ರಮ ಆಯ್ತು? ರೇಣುಕಾಚಾರ್ಯ ವಿರುದ್ಧ ಏನು ಕ್ರಮ ಆಗಿದೆ. ರಾಜ್ಯದ ನಾಯಕರಿಗೆ ಹೈಕಮಾಂಡ್ ಕವಡೆ ಕಾಸಿನ ಕಿಮ್ಮತ್ತು ಕೊಡುವುದಿಲ್ಲ ಎಂದು ರಾಜ್ಯ ಬಿಜೆಪಿ ನಾಯಕರನ್ನು ಲೇವಡಿ ಮಾಡಿದರು.
ರಾಜು ಕಪನೂರು ಜೊತೆಗೆ ತಾನು ಇದ್ದ ಫೋಟೋ ರಿಲೀಸ್ ಮಾಡಿದ ಬಿಜೆಪಿ ನಾಯಕರಿಗೆ ತಿರುಗೇಟು ಕೊಟ್ಟ ಪ್ರಿಯಾಂಕ್‌ ಖರ್ಗೆ ರಾಜು ಕಪನೂರು ಬಿಜೆಪಿ ನಾಯಕರ ಜೊತೆ ಇದ್ದ ಫೋಟೋ ಬಿಡುಗಡೆ ಮಾಡಿದರು. ರಾಜು ಕಪನೂರು ಬಿಜೆಪಿಯಲ್ಲಿ ಮೊದಲು ಇದ್ದರು. ಫೋಟೊ ಹಲವಾರು ಇವೆ‌. ಆದರೆ ಸತ್ಯ ಏನು? ರಾಜು ಕಪನೂರು ಪರಿಚಯ ಇಲ್ಲ ಅಂತ ನಾವು ಹೇಳಿಲ್ಲ. ನಟಿಯರ ಡ್ರಗ್ ಕೇಸ್‌ನಲ್ಲಿ ನಟಿ ವಿಪಕ್ಷ ನಾಯಕ ಅಶೋಕ್ ಜೊತೆ ನಟಿಯರ ಫೋಟೊ ಇತ್ತು. ಹಾಗಾದ್ರೆ ಅದಕ್ಕೆ ಅಶೋಕ್ ಸಂಬಂಧ ಹೇಳೋಕೆ ಆಗುತ್ತಾ? ಎಂದು ಕೇಳಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top