ಪುತ್ತೂರು: ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಹಕೀಂ ಕೂರ್ನಡ್ಕ ಎಂಬವರಿಗೆ ವಾಯ್ಸ್ ಮೆಸೇಜ್ ಮೂಲಕ ಜೀವ ಬೆದರಿಕೆ ಒಡ್ಡಿದ ಇಬ್ಬರು ವ್ಯಕ್ತಿಗಳ ವಿರುದ್ಧ ಕೇಸು ದಾಖಲಿಸಲು ಪುತ್ತೂರು ನ್ಯಾಯಾಲಯ ಅನುಮತಿ ನೀಡಿದೆ.
ಇತ್ತೀಚೆಗೆ ಹಕೀಂ ಕೂರ್ನಡ್ಕ ಅವರು ಶಾಸಕ ಅಶೋಕ್ ರೈ ಅವರ ಕಾರ್ಯ ವೈಖರಿ ಖಂಡಿಸಿ ಮಾಧ್ಯಮ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ವಾಟ್ಸಾಪ್ ನಲ್ಲಿ ವಾಯ್ಸ್ ಮೆಸೇಜ್ ಮೂಲಕ ವ್ಯಕ್ತಿಗಳಿಬ್ಬರು ಹಕೀಂ ಅವರಿಗೆ ಜೀವ ಬೆದರಿಕೆ ಒಡ್ಡಿದ್ದರು. ಇದರ ವಿರುದ್ಧ ಹಕೀಂ ಅವರು ಪುತ್ತೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಎಫ್ ಐ ಆರ್ ದಾಖಲು ಮಾಡಲು ಪೊಲೀಸರು ನ್ಯಾಯಾಲಯದ ಅನುಮತಿ ಕೋರಿದ್ದರು.
ಇದೀಗ ನ್ಯಾಯಾಲಯವು ಆರೋಪಿಗಳಿಬ್ಬರ ವಿರುದ್ಧ ಎಫ್ ಐ. ಆರ್ ದಾಖಲಿಸಲು ಪೊಲೀಸರಿಗೆ ಅನುಮತಿ ನೀಡಿದೆ.