ಮಹಾರಾಷ್ಟ್ರ : ಮೂರನೇ ಬಾರಿಯೂ ಹೆಣ್ಣುಮಗುವನ್ನು ಹೆತ್ತಿದ್ದಕ್ಕೆ ಪತಿಯೊಬ್ಬ ಪತ್ನಿಯನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಹೆಣ್ಣು-ಗಂಡು ಇಬ್ಬರೂ ಸಮಾನರು ಎನ್ನುವ ಈ ಕಾಲದಲ್ಲಿ ಹೆಣ್ಣುಮಗುವನ್ನು ಹೆತ್ತಿದ್ದಕ್ಕೆ ಪತ್ನಿಯನ್ನೇ ಬೆಂಕಿ ಹಚ್ಚಿ ಗಂಡ ಕೊಲೆ ಮಾಡಿರುವ ಘಟನೆ ನಡೆದಿದೆ. ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಮಹಿಳೆ ಮೂರನೇ ಹೆಣ್ಣುಮಗುವಿಗೆ ಜನ್ಮ ನೀಡಿದ್ದಳು, ಕೋಪಗೊಂಡ ಪತಿ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ್ದಾನೆ.
ಆಕೆ ಹೆರುವ ಮೊದಲೆ ಮುಂದೆ ಯು ಹೆಣ್ಣು ಮಗುವಿಗೆ ನೀಡಿದರೆ ನಿನ್ನನ್ನು ಜೀವಂತವಾಗಿ ಬದುಕಲು ಬಿಡುವುದಿಲ್ಲವೆಂದು ಬೆದರಿಕೆ ಹಾಕಿದ್ದಾನೆ. ಈ ಸೂಚನೆಯಂತೆ ಪತ್ನಿಯನ್ನು ಪೆಟ್ರೋಲ್ ಸುರಿದು ಸುಟ್ಟಿದ್ದಾನೆ.
ಆರೋಪಿ ಪತಿ ಕುಂಡ್ಲಿಕ್ ಉತ್ತಮ್ ಕಾಳೆ (32), ಮೃತಳು ಪತ್ನಿ ಮೈನಾ ಎಂದು ಗುರುತಿಸಲಾಗಿದೆ.
ಆರೋಪಿ ಪತಿ ಕುಂಡ್ಲಿಕ್ ಉತ್ತಮ್ ಕಾಳೆ ವಿರುದ್ದ ಮೈನಾ ಅವರ ಸಹೋದರಿ ದೂರು ನೀಡಿದ್ದಾರೆ. ದೂರಿನ ಪ್ರಕಾರ, ಆರೋಪಿಯು ನೀನು ಮೂರನೇ ಸಲವೂ ಹೆಣ್ಣುಮಗುವಿಗೆ ಜನ್ಮ ನೀಡಿದರೆ ಜೀವಂತ ಉಳಿಸುವುದಿಲ್ಲ ಎಂದು ಬೆದರಿಕೆ ಹಾಕುತ್ತಿದ್ದ. ಈ ವಿಚಾರವಾಗಿ ಪದೇ ಪದೇ ಜಗಳವಾಡುತ್ತಿದ್ದ ಎಂದು ತಿಳಿಸಿದ್ದಾರೆ.
ಹಾಗೆಯೇ ಮಗು ವಿಚಾರವಾಗಿ ಮತ್ತೆ ಜಗಳವಾಗಿದ್ದು, ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ. ಬೆಂಕಿ ಮೈ ಮೇಲೆ ಸುಟ್ಟುಕೊಂಡಿದ್ದರಿಂದ ತಾಳೆಲಾರದೆ ಆಕೆ ಕಿರುಚುತ್ತಾ ಮನೆಯಿಂದ ಓಡಿ ಹೋಗಿದ್ದಾಳೆ. ಜನರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿದರು. ಆದರೆ ಆಕೆ ಅಷ್ಟರಲ್ಲೇ ಸುಟ್ಟುಹೋಗಿದ್ದಳು, ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ.
ಈ ದೂರಿನ ಆಧಾರದ ಮೇಲೆ ಪೊಲೀಸರು ಕುಂಡ್ಲಿಕ್ ಕಾಳೆ ವಿರುದ್ಧ ಕೊಲೆ ಪ್ರಕರಣ ದಾಖಲಿಸಿಕೊಂಡು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ಪೂರ್ಣಗೊಳ್ಳುವವರೆಗೂ ಈ ಬಗ್ಗೆ ಯಾವುದೇ ಹೇಳಿಕೆ ನೀಡಲಾಗುವುದಿಲ್ಲ ಎಂದು ಪೊಲೀಸರು ಎಂದಿದ್ದಾರೆ.