ಮಂಗಳೂರು : ತನ್ನ ಮೂವರು ಮಕ್ಕಳನ್ನು ಹಾಗೂ ಪತ್ನಿಯನ್ನು ಬಾವಿಗೆ ದೂಡಿ ಹಾಕಿ ಕೊಲೆಗೈದ ಘಟನೆ ತಾಳಿಪಾಡಿ ಗ್ರಾಮದ ಪದ್ಮನೂರು ಎಂಬಲ್ಲಿ ನಡೆದಿದೆ.
ತಾಳಿಪಾಡಿ ಗ್ರಾಮದ ಪದ್ಮನೂರು ಎಂಬಲ್ಲಿ 2022ರ ಜೂನ್ 23ರಂದು ಸಂಜೆ 5:15ಕ್ಕೆ ಹಿತೇಶ್ ಶೆಟ್ಟಿಗಾರ್ ತನ್ನ ಮಕ್ಕಳಾದ ರಶ್ಮಿತಾ (13), ಉದಯ ಕುಮಾರ (11), ದಕ್ಷಿತ್ (5) ಎಂಬವರನ್ನು ಬಾವಿಗೆ ದೂಡಿ ಹಾಕಿ ಕೊಲೆ ಮಾಡಿದ್ದಲ್ಲದೆ ತನ್ನ ಪತ್ನಿ ಲಕ್ಷ್ಮಿ ಎಂಬವರನ್ನು ಬಾವಿಗೆ ದೂಡಿಹಾಕಿ ಕೊಲೆ ಮಾಡಿದ್ದಾನೆ.
ಈ ಹಿನ್ನಲೆ ತನ್ನ ಮಕ್ಕಳನ್ನು ಹಾಗೂ ಪತ್ನಿಯನ್ನು ಕೊಲೆಗೈದ ಆರೋಪಿ ಹಿತೇಶ್ ಶೆಟ್ಟಿಗಾರ್ ಎಂಬವನನ್ನು ಮಂಗಳೂರು ನ್ಯಾಯಾಲಯವು ಮರಣ ದಂಡನೆ ವಿಧಿಸಿ ಆದೇಶ ಹೊರಡಿಸಿದೆ.
ಏನಿದು ಪ್ರಕರಣ ..?
ಆರೋಪಿಯು ತನ್ನ ಪತ್ನಿಯ ಜೊತೆ ಜಗಳವಾಡುತ್ತಿದ್ದ ಅದೇ ದ್ವೇಷದಿಂದ ಶಾಲೆಯಿಂದ ಬಂದ ತನ್ನ ಮೂವರು ಮಕ್ಕಳನ್ನು ಬಾವಿಗೆ ದೂಡಿ ಹಾಕಿ ಕೊಲೆ ಮಾಡಿದ್ದಲ್ಲದೆ , ಸಂಜೆ ಹೊಟೇಲಲ್ಲಿ ಕೆಲಸ ಮುಗಿಸಿ ಮನೆಗೆ ಬಂದ ಹೆಂಡತಿಯನ್ನು ಸಹ ಮನೆಯ ಪಕ್ಕದ ಬಾವಿಗೆ ದೂಡಿ ಹಾಕಿದ್ದಾನೆ. ಬಾವಿಗೆ ದೂಡಿದರಿಂದ ಭಯಗೊಂಡ ಲಕ್ಷ್ಮಿಯ ಬೊಬ್ಬೆ ಕೇಳಿ ರಸ್ತೆ ಬದಿ ಹೂವಿನ ವ್ಯಾಪಾರ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಬಾವಿಗೆ ಇಳಿದು ಲಕ್ಷ್ಮಿಯವರನ್ನು ರಕ್ಷಿಸಿದ್ದರು. ಮಕ್ಕಳನ್ನು ಬಾವಿಗೆ ದೂಡಿ ಹಾಕಿದಾಗ ಹಿರಿಯ ಮಗಳು ರಶ್ಮಿತಾ ಬಾವಿಗೆ ಅಳವಡಿಸಿದ್ದ ಪಂಪಿನ ಪೈಪನ್ನು ಹಿಡಿದುಕೊಂಡಿದ್ದಳು ಇದನ್ನು ಕಂಡ ಆರೋಪಿ ಹಿತೇಶ್ ಶೆಟ್ಟಿಗಾರ್ ಕತ್ತಿಯಿಂದ ಪೈಪನ್ನು ಕತ್ತರಿಸಿದ್ದಾನೆ.
ಘಟನೆಯ ವಿರುದ್ದ ಲಕ್ಷ್ಮಿ ನೀಡಿದ ದೂರಿನಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಅಂದಿನ ಪೊಲೀಸ್ ನಿರೀಕ್ಷಕ ಕುಸುಮಾಧರ ತನಿಖೆ ನಡೆಸಿ ಅರೋಪಿಯ ವಿರುದ್ಧ ದೋಷರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಎಸ್ಸೆ ಸಂಜೀವ ತನಿಖೆಗೆ ಸಹಕರಿಸಿದ್ದರು. ಸರಕಾರದ ಪರವಾಗಿ ಅಭಿಯೋಜಕ ಮೋಹನ ಕುಮಾರ್ ವಾದ ಮಂಡಿಸಿದ್ದರು.
ಆರೋಪಿಯು ಕೊಲೆ ಹಾಗೂ ಕೊಲೆಯತ್ನ ನಡೆಸಿರುವುದು ಸಾಬೀತಾಗಿರುವುದಾಗಿ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸಂಧ್ಯಾ ಆರೋಪಿಗೆ ಮರಣ ದಂಡನೆ ವಿಧಿಸಿರುತ್ತಾರೆ.