ಪುತ್ತೂರು: ಕಾರೊಂದು ರಸ್ತೆ ಅಂಚಿನ ಕಂದಕಕ್ಕೆ ಉರುಳಿ ಬಿದ್ದು ಸಂಪೂರ್ಣ ಜಖಂಗೊಂಡ ಘಟನೆ ಉಪ್ಪಿನಂಗಡಿ-ಪುತ್ತೂರು ಹೆದ್ದಾರಿಯ ಸೇಡಿಯಾಪು ಸಮೀಪದ ಕಾಪು ಎಂಬಲ್ಲಿ ಇಂದು ನಡೆದಿದೆ.
ಕಾರಿನಲ್ಲಿ ತೆರಳಿ ಒತ್ತೆಕೋಲದಲ್ಲಿ ಭಾಗವಹಿಸಿ ವಾಪಸ್ಸು ಮನೆಗೆ ತೆರಳುತ್ತಿದಾಗ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಐವರು ಪ್ರಾಣಾಪಾಯದಿಂದ ಪಾರಾಗಿದ್ದು ಮಾರುತಿ ಕಾರು ಪುತ್ತೂರಿನಿಂದ ಉಪ್ಪಿನಂಗಡಿ ಕಡೆಗೆ ಚಲಿಸುತ್ತಿದ್ದ ವೇಳೆ ಸೇಡಿಯಾಪು ಜಂಕ್ಷನ್ ನಿಂದ 250 ಮೀ ದೂರದ ಕಾಪು ಎಂಬಲ್ಲಿ ಎಡ ಬದಿಗೆ ಚಲಿಸಿ ತೋಟದ ನೀರು ಹರಿಯುವ ಕಾಲುವೆಗೆ ಬಿದ್ದಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆಯ ಪಾರ ನಿವಾಸಿ ಚರಣ್ ಎಂಬವರು ಕಾರನ್ನು ಚಾಲನೆ ಮಾಡುತ್ತಿದ್ದು, ಕಾರಿನಲ್ಲಿ ಚರಣ್, ಅವರ ತಂದೆ, ಬಾವ ಹಾಗೂ ಇಬ್ಬರು ಮಕ್ಕಳು ಪ್ರಯಾಣಿಸುತ್ತಿದ್ದರು. ಗಾಯಗಳುಗಳು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.