ಎಡಮಂಗಲ: ಗ್ರಾಮದ ಹೇಮಳ ದಿ. ಈಶ್ವರ ಗೌಡರ ಪುತ್ರ, ಬಂಟ್ವಾಳ ಬಿಇಒ ಕಚೇರಿಯಲ್ಲಿ ಉದ್ಯೋಗಿಯಾಗಿದ್ದ ಪ್ರಕಾಶ್ಚಂದ್ರ ಹೇಮಳ (38) ರವರು ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಬೆಳಿಗ್ಗೆ ನಿಧನರಾದರು.
ಸುಳ್ಯ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಉದ್ಯೋಗಿಯಾಗಿದ್ದ ಅವರು ಆ ಬಳಿಕ ಬಂಟ್ವಾಳ ಬಿಇಒ ಕಚೇರಿಗೆ ವರ್ಗಾವಣೆಗೊಂಡಿದ್ದರು. ಹೇಮಳ ಪರಿಸರದಲ್ಲಿ ಧಾರ್ಮಿಕ ಮತ್ತು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಮೃತರು ಪತ್ನಿ ಸ್ವಾತಿ, ಪುತ್ರಿ ಗಹನ, ಕುಟುಂಬಸ್ಥರು ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ