ಕಡಬ : ಕಾಲೇಜ್ ವಿದ್ಯಾರ್ಥಿನಿಯನ್ನು ಪ್ರೀತಿಸುವ ನೆಪದಲ್ಲಿ ದೈಹಿಕ ಸಂಪರ್ಕ ಬೆಳೆಸಿ ಅದನ್ನು ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಒಂಕಲ್ ನಿವಾಸಿ ಪ್ರವೀಣ್ ಪೂಜಾರಿ ಬಂಧಿತ ಆರೋಪಿ.
ಸಂತ್ರಸ್ತೆಯು ಕಾಲೇಜು ವಿದ್ಯಾರ್ಥಿನಿಯಾಗಿದ್ದು ಆಕೆಯನ್ನು ಪ್ರವೀಣ್ ಪ್ರೀತಿಯ ಬಲೆಗೆ ಬೀಳಿಸಿದ ಬಳಿಕ ತನ್ನ ಬಾಡಿಗೆ ಮನೆಗೆ ಕರೆದುಕೊಂಡು ಬಂದು ಲೈಂಗಿಕವಾಗಿ ಬಳಸಿಕೊಂಡಿದ್ದ. ಅಲ್ಲದೆ ವೀಡಿಯೋ ಚಿತ್ರೀಕರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಅನೇಕ ಬಾರಿ ಆಕೆಯನ್ನು ಪುತ್ತೂರು ಬಳಿಯ ಬಾಡಿಗೆ ರೂಂಗೆ ಕರೆದೊಯ್ದು ದೈಹಿಕವಾಗಿ ಬಳಸಿಕೊಂಡಿದ್ದ. ಆಕೆ ಗರ್ಭಿಣಿಯಾಗದಂತೆ ಮಾತ್ರೆಯನ್ನು ತಂದುಕೊಟ್ಟಿದ್ದ ಅದರ ಜತೆಗೆ ಖಾಸಗಿ ಕ್ಷಣದ ವೀಡಿಯೋಗಳನ್ನು ತನ್ನ ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿಕೊಂಡಿದ್ದ ಡಿ.10 ರಂದು ಕುಂಬ್ರದಲ್ಲಿರುವ ಬಾಡಿಗೆ ರೂಂಗೆ ಆಕೆಯನ್ನು ಕರೆದೊಯಿದು ಅಲ್ಲೇ ಉಳಿದುಕೊಂಡು ದೈಹಿಕ ಸಂಪರ್ಕ ಬೆಳೆಸಿದ್ದ.
ಮರುದಿನ (ಡಿ 11) ರೂಂನಲ್ಲಿ ಇರುವಾಗಲೇ ಬಾಲಕಿ ಜತೆ ತಗಾದೆ ತೆಗೆದು ದೈಹಿಕ ಹಿಂಸೆ ನೀಡಿ ಜಗಳವಾಡಿದ್ದ. ಬಳಿಕ ಬೈಕಿನಲ್ಲಿ ಕರೆದೊಯ್ದು ಫರಂಗಿಪೇಟೆ ಬಳಿ ರಸ್ತೆ ಬದಿ ಬಿಟ್ಟು ಹೋಗಿದ್ದು, ಮನೆಯವರಿಗೆ ವಿಷಯ ತಿಳಿಸಿದ್ದ. ಮನೆಮಂದಿ ಧೈರ್ಯ ತುಂಬಿ ಮನೆಗೆ ಕರೆ ತಂದಿದ್ದರು. ಯುವಕ ಬೇರೆ ಹುಡುಗಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡು ಆ ವಿಷಯವನ್ನು ಮುಚ್ಚಿಟ್ಟು ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ್ದಾಗಿ ಬಾಲಕಿ ದೂರಿನಲ್ಲಿ ಆರೋಪಿಸಿದ್ದಾರೆ. ದೂರು ಸ್ವೀಕರಿಸಿದ ಕಡಬ ಪೊಲೀಸರು ಸುಳ್ಯದಲ್ಲಿದ್ದ ಯುವಕನನ್ನು ಬಂಧಿಸಿ ಆತನ ವಿರುದ್ಧ ಪೋಕ್ಸೊ, ಅಟ್ರಾಸಿಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ