ಎಚ್‌ಎಂಪಿವಿ ವೈರಸ್‌ ಸೋಂಕಿಗೆ ಸಾಮಾನ್ಯ ಎಚ್ಚರಿಕೆ ಸಾಕು : ಕೇಂದ್ರ ಮಾರ್ಗಸೂಚಿ

ಚಳಿಗಾಲದಲ್ಲಿ ಕಾಣಿಸಿಕೊಳ್ಳುವ ಶೀತ ಜ್ವರದ ಚಿಕಿತ್ಸೆ ಪಡೆಯಲು ಸಲಹೆ

ಹೊಸದಿಲ್ಲಿ : ಚೀನದಲ್ಲಿ ಕಂಡು ಬಂದಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ (HMPV) ಹರಡುವ ಬಗ್ಗೆ ಭಯಪಡುವ ಅಗತ್ಯವಿಲ್ಲ. ಎಲ್ಲ ಉಸಿರಾಟದ ಸೋಂಕುಗಳ ವಿರುದ್ಧ ತೆಗೆದುಕೊಳ್ಳುವ ಸಾಮಾನ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡರೆ ಸಾಕು ಎಂದು ಕೇಂದ್ರ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ ಹೇಳಿದೆ.

ನಾವು ದೇಶದಲ್ಲಿ ಉಸಿರಾಟದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ದಾಖಲಾದ ರೋಗಿಗಳ ಡೇಟಾವನ್ನು ವಿಶ್ಲೇಷಿಸಿದ್ದೇವೆ. ಡಿಸೆಂಬರ್ 2024ರ ಡೇಟಾದಲ್ಲಿ ಯಾವುದೇ ಗಣನೀಯ ಹೆಚ್ಚಳ ಕಂಡುಬಂದಿಲ್ಲ. ನಮ್ಮ ಯಾವುದೇ ಸಂಸ್ಥೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಕೇಸ್‌ ದಾಖಲಾದ ಬಗ್ಗೆ ವರದಿಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯದ ಅಧಿಕಾರಿ ಡಾ.ಅತುಲ್ ಗೋಯೆಲ್ ಹೇಳಿದ್ದಾರೆ.































 
 

HMPVಗೆ ಯಾವುದೇ ನಿರ್ದಿಷ್ಟ ಆಂಟಿವೈರಲ್ ಚಿಕಿತ್ಸೆ ಇಲ್ಲ, ಆದ್ದರಿಂದ ಅದರ ಹರಡುವಿಕೆಯನ್ನು ನಿಯಂತ್ರಿಸಲು ತಡೆಗಟ್ಟುವಿಕೆ ಮುಖ್ಯವಾಗಿದೆ. ಚೀನದಲ್ಲಿ HMPV ಏಕಾಏಕಿ ಹರಡಿರುವ ಬಗ್ಗೆ ಸುದ್ದಿಗಳಿವೆ. ಇದು ಯಾವುದೇ ಇತರ ಉಸಿರಾಟದ ವೈರಸ್‌ನಂತೆ ಸಾಮಾನ್ಯ ಶೀತವನ್ನು ಉಂಟುಮಾಡುತ್ತದೆ ಮತ್ತು ವಯಸ್ಸಾದವರಲ್ಲಿ ಮತ್ತು ಚಿಕ್ಕವರಲ್ಲಿ ಇದು ಜ್ವರಕ್ಕೆ ಕಾರಣವಾಗಬಹುದು. ಚಳಿಗಾಲದಲ್ಲಿ ಉಸಿರಾಟದ ವೈರಸ್ ಸೋಂಕುಗಳು ಉಲ್ಬಣವಾಗುವುದು ಸಾಮಾನ್ಯ. ಯಾರಿಗಾದರೂ ಕೆಮ್ಮು ಮತ್ತು ಶೀತ ಇದ್ದರೆ ಅವರು ಇತರ ಜನರೊಂದಿಗೆ ಸಂಪರ್ಕಕ್ಕೆ ಬರುವುದನ್ನು ತಪ್ಪಿಸಬೇಕು. ಕೆಮ್ಮು, ಶೀತ ಬಂದಾಗ ಪ್ರತ್ಯೇಕ ಕರವಸ್ತ್ರ ಅಥವಾ ಟವೆಲ್ ಬಳಸಿ ಎಂದು ಸಲಹೆ ನೀಡಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top