ಪುತ್ತೂರು : ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆ, ಕುತ್ಯಾರು ಇದರ ವಾರ್ಷಿಕೋತ್ಸವ ನಡೆಯಿತು.
ಆನೆಗುಂದಿ ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆ, ಕುತ್ಯಾರು ಇದರ ವಾರ್ಷಿಕೋತ್ಸವವನ್ನು ಪಡುಕುತ್ಯಾರು ಸರಸ್ವತಿ ಪೀಠದ ಶ್ರೀ ಕಾಳಹಸ್ತೇಂದ್ರ ಸರಸ್ವತಿ ಮಹಾ ಸ್ವಾಮೀಜಿ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು.
ಬಳಿಕ ಉಡುಪಿ ಕಲಾ ರಂಗ (ರಿ)ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಜರುಗಿದ ಯಕ್ಷಗಾನ ತರಗತಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಗುರುಗಳಾದ ರಾಮಕೃಷ್ಣ ನಂದಿಕೂರು ಇವರನ್ನು ಶಾಲಾ ಶೈಕ್ಷಣಿಕ ಸಲಹೆಗಾರ ದಿವಾಕರ ಆಚಾರ್ಯ ಗೇರುಕಟ್ಟೆ ಗೌರವಿಸಿದರು . ಉಸ್ತುವಾರಿ ಶಿಕ್ಷಕಿ ಅನಿತಾ ತರಬೇತಿಯ ಮಾಹಿತಿ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಆಡಳಿತ ಮಂಡಳಿಯ ಕಾರ್ಯದರ್ಶಿ ಗುರುರಾಜ್ ಆಚಾರ್ಯ. ಕೆ ಮಾತನಾಡಿ ನೂತನ ಕಟ್ಟಡದಲ್ಲಿ ಎಲ್ ಕೆ ಜಿ,ಯು ಕೆ ಜಿ ಮತ್ತುಕಂಪ್ಯೂಟರ್ ವಿಭಾಗ ಆರಂಭದಿಂದ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗಲಿದ್ದು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಹೆಚ್ಚಿನ ಮಕ್ಕಳು ದಾಖಲಾಗುವಂತೆ ಪೋಷಕರು ಮತ್ತು ಶಿಕ್ಷಕರು ಸಹಕರಿಸಬೇಕೆಂದು ತಿಳಿಸಿದರು.
ಶಾಲಾ ಮುಖ್ಯೋಪಾಧ್ಯಾಯನಿ ಸಂಗೀತಾ ರಾವ್ ವಾರ್ಷಿಕ ವರದಿಯನ್ನು ವಾಚಿಸಿದ್ದು. ನರ್ಸರಿಯಿಂದ 10ನೇ ತರಗತಿಯ ವರೆಗಿನ ಸ್ಪರ್ಧಾವಿಜೇತರಿಗೆ ಬಹುಮಾನವನ್ನು ವಿತರಿಸಲಾಯಿತು. ಅಸ್ಸೆಟ್ ಅಧ್ಯಕ್ಷ ಬಿ ಸೂರ್ಯ ಕುಮಾರ ಹಳೆಯಂಗಡಿ, ಗೌರವಾಧ್ಯಕ್ಷ ಬಿ. ಮೋಹನ್ ಕುಮಾರ್ ಬೆಳ್ಳೂರು, ಉಪಾಧ್ಯಕ್ಷ ವಿವೇಕ ಆಚಾರ್ಯ ಶಿರ್ವ, ಜನಾರ್ದನ ಆಚಾರ್ಯ ಬಜಕೂಡ್ಲು, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ವಿಜಯಲಕ್ಷ್ಮಿ ತಂತ್ರಿ, ಮಾತೃ ಮಂಡಳಿಯ ಅಧ್ಯಕ್ಷೆ ಶೋಭಾ ಆಚಾರ್ಯ ಇವರು ಕ್ರೀಡೆ, ಕಲಿಕೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಬಹುಮಾನ ವಿತರಿಸಿದರು.
ಶಿಕ್ಷಕಿ ಸೌಮ್ಯ ಸ್ವಾಗತಿಸಿ, ಶಿಕ್ಷಕಿ ಪ್ರತಿಮಾ, ವಾಣಿ, ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ್ ಬಹುಮಾನ ವಿತರಣೆಯಲ್ಲಿ ಸಹಕರಿಸಿದರು . ಶಿಕ್ಷಕಿ ಭವ್ಯಶ್ರೀ ಕಾರ್ಯಕ್ರಮ ನಿರೂಪಿಸಿ ಅಮಿತಾ ವಂದಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ರಮ್ಯಾ ಹಾಗೂ ಮಂಜುನಾಥ ಶೇಟ್ ನಿರ್ವಹಿಸಿದರು.