ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಬಾನೋತ್ ದುರ್ಗಾ | ಅಪರೂಪದ ಹೆರಿಕೆ ಪ್ರಕರಣ

ಮಂಗಳೂರು: ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನನ ನೀಡಿರುವ ಅಪರೂಪದ ಘಟನೆ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಿಂದ ವರದಿಯಾಗಿದೆ.

ತೆಲಂಗಾಣ ರಾಜ್ಯದ ತೇಜ ಎಂಬವರ ಪತ್ನಿ ಬಾನೋತ್ ದುರ್ಗಾ ಅವರು ನಾಲ್ಕು ಮಕ್ಕಳಿಗೆ ಜನನ ನೀಡಿದ ಮಹಾತಾಯಿ. ವೈದ್ಯರ ತಂಡ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಿದ್ದು, ತಾಯಿ ಮಕ್ಕಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.

ಈ ನಾಲ್ಕು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳು. 1.1, 1.2, 800, 900 ಗ್ರಾಂ ತೂಕ ಹೊಂದಿದೆ. ಆದರೆ 30 ವಾರಗಳ ಹೆರಿಗೆಯಾಗಿದ್ದು, ಪ್ರಸವ ಪೂರ್ವ ಜನನವಾದ್ದರಿಂದ ಸದ್ಯ ಮಕ್ಕಳಿಗೆ ಎನ್‌ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.































 
 

ನಾಲ್ಕು ಮಕ್ಕಳ ಜನನ ಬಹಳ ಅಪರೂಪವಾಗಿದ್ದು, ಇದು 7,00,000 ಗರ್ಭಧಾರಣೆಗಳಲ್ಲಿ ಒಂದರಲ್ಲಿ ಮಾತ್ರ ಸಂಭವಿಸುತ್ತವೆ ಎನ್ನಲಾಗುತ್ತದೆ. ಸ್ತ್ರೀರೋಗತಜ್ಞ, ಡಾ.ಜೋಯೀನ್ ಡಿಅಡಾ ಗರ್ಭಿಣಿಯ ಪ್ರಸವಪೂರ್ವ ಆರೈಕೆ ಮಾಡಿದರು. ಹೆರಿಗೆ ಸಂದರ್ಭ ಆಸ್ಪತ್ರೆಯ ಹೆರಿಗೆ ಮತ್ತು ಮಕ್ಕಳ ವಿಭಾಗದ ವೈದ್ಯಕೀಯ ತಂಡ ಮುತುವರ್ಜಿಯಿಂದ ಕಾರ್ಯನಿರ್ವಹಿಸಿ ತಾಯಿ-ಮಕ್ಕಳಿಗೆ ಆರೈಕೆ ಮಾಡಿದೆ. ದ.ಕ.ಜಿಲ್ಲೆಯ ಇತಿಹಾಸದಲ್ಲಿ ಇದೊಂದು ಅಪರೂಪದ ಹೆರಿಗೆ ಪ್ರಕರಣವಾಗಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top