ಪುತ್ತೂರು :ಹಿಂದೂ ಜನ ಜಾಗೃತಿ ಸಮಿತಿ ಪುತ್ತೂರು ವತಿಯಿಂದ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಆಗುತ್ತಿರುವ ಅಮಾನವೀಯ ಆಕ್ರಮಣವನ್ನ ಖಂಡಿಸಿ ಹಿಂದೂ ಜನಜಾಗೃತಿ ಸಮಿತಿ ಭಿತ್ತಿಪತ್ರ ಹಿಡಿದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.
ಕಳೆದ ಅನೇಕ ವರ್ಷಗಳಿಂದ ಬಾಂಗ್ಲಾದೇಶದಲ್ಲಿನ ಅಲ್ಪ ಸಂಖ್ಯಾತ ಹಿಂದೂಗಳ ಮೇಲೆ ಅತ್ಯಂತ ಅಮಾನವೀಯವಾಗಿ ಆಕ್ರಮಣಗಳಾ ಗುತ್ತಿದ್ದು, ಹಿಂದೂಗಳನ್ನು ಅತ್ಯಂತ ಬರ್ಬರ ವಾಗಿ ಹತ್ಯೆ ಮಾಡುತ್ತಿದ್ದಾರೆ. ಹಿಂದೂ ಸ್ತ್ರೀಯರನ್ನು ಅತ್ಯಾಚಾರ ಮಾಡುವುದು, ಹಿಂದೂಗಳ ಅಸ್ತಿ ವಶ ಪಡಿಸಿಕೊಳ್ಳುವುದು ನಿರಂತರ ನಡೆಯುತ್ತಿದೆ. ಅನೇಕ ದೇಶಗಳಲ್ಲಿ ಆದ್ಯಾತ್ಮ ಪ್ರಸಾರ ಮಾಡುವ ಇಸ್ಕಾನ್ ಸಂಸ್ಥೆಯ ಮೇಲೆ ಅಕ್ರಮಣವನ್ನು ಮಾಡಿ ಅದರ ಪ್ರಮುಖರ ಮೇಲೆ ದಾಳಿ ಮಾಡುವುದು. ಈ ಎಲ್ಲಾ ಕೃತ್ಯಗಳ ಬಗ್ಗೆ ವಿಶ್ವದಾದ್ಯಂತ ದೊಡ್ಡ ಪ್ರಮಾಣದಲ್ಲಿ ವಿರೋಧ ವ್ಯಕ್ತ ವಾಗುತ್ತಿದೆ. ಕೂಡಲೇ ಬಾಂಗ್ಲಾದೇಶದಲ್ಲಿ ಭಾರತೀಯರ ಮೇಲೆ ಆಗುವ ನಿರಂತರ ಆಕ್ರಮಣದ ಬಗ್ಗೆ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಿ ಕೂಡಲೇ ಒಂದು ನಿರ್ಣಯಕೈಗೊಳ್ಳಬೇಕಿದೆ. ಹಾಗಾಗಿ ಹಿಂದೂ ಜನಜಾಗೃತಿ ಸಮಿತಿ ಕೇಂದ್ರ ಸರ್ಕಾರಕ್ಕೆ ಒಂದು ಮನವಿ ತಲುಪಿಸುವ ಉದ್ದೇಶದಿಂದ ಪ್ರತೀ ತಾಲೂಕು ಕೇಂದ್ರಗಳಲ್ಲಿ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯಲ್ಲಿ ಹರಿಪ್ರಸಾದ್ ನೆಲ್ಲಿಕಟ್ಟೆ,ಬಾಲಚಂದ್ರ ಸೊರಕೆ, ಶ್ರೀಧರ ಪೂಜಾರಿ, ಬಾಲಕೃಷ್ಣ ಗೌಡ, ದೇಜಪ್ಪ ಗೌಡ, ಲಕ್ಷ್ಮಣ ಗೌಡ, ಗೋಪಾಲ ಕೃಷ್ಣ ಪಿಲಿಗೂಡು, ಜಯಾನಂದ ಕಲ್ಲಾಪು, ಮದ್ವಾರಾಜ್, ರಾಘವೇಂದ್ರ ಆಚಾರ್ಯ, ತಾರಾನಾಥ್ ಗೌಡ, ಹರಿ ಪ್ರಸಾದ್ ಶೆಟ್ಟಿ, ದಯಾನಂದ ಹೆಗ್ಡೆ, ಬಾಲಕೃಷ್ಣ ಶೆಟ್ಟಿ, ಪ್ರಶಾಂತ್ ಏನ್ಮಾಡಿ, ಪದ್ಮಶ್ರೀ ಮೊದಲಾದವರು ಉಪಸ್ಥಿತರಿದ್ದರು.