ಬೆಂಗಳೂರಿನಲ್ಲಿ ಎಚ್‌ಎಂಪಿವಿ ವೈರಸ್‌ ಪತ್ತೆ

ಎಂಟು ತಿಂಗಳ ಮಗುವಿಗೆ ವೈರಸ್‌ ಸೋಂಕು

ಬೆಂಗಳೂರು : ಬೆಂಗಳೂರಿನಲ್ಲಿ 8 ತಿಂಗಳ ಮಗುವಿನಲ್ಲಿ ಎಚ್​ಎಂಪಿವಿ ವೈರಸ್ ದೃಢಪಟ್ಟಿದೆ. ಮಗುವಿಗೆ ಜ್ವರ ಬಂದ ಕಾರಣ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ ಎಚ್​ಎಂಪಿವಿ ವೈರಸ್ ಇರುವುದು ಪತ್ತೆಯಾಗಿದೆ.
ಈ ಮೂಲಕ ದೇಶದ ಮೊದಲ ಎಚ್​ಎಂಪಿವಿ ವೈರಸ್ ಪ್ರಕರಣ ಪತ್ತೆಯಾದಂತಾಗಿದೆ. ಭಾರತದಲ್ಲೂ ಎಚ್‌ಎಂಪಿ ವೈರಸ್‌ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ಚೀನದಲ್ಲಿ ಮ್ಯುಟೇಟ್ ಆಗಿರುವ ವೈರಸ್​ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ ಎಚ್‌ಎಂಪಿವಿ ವೈರಸ್ಸೇ ಅಥವಾ ಚೀನದ ತಳಿಯಾ ಎಂಬ ಗೊಂದಲ ಇದೆ. ಭಾರತದಲ್ಲೂ ಸಾಮಾನ್ಯ ಎಚ್​ಎಂಪಿವಿ ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.
ಸದ್ಯ ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ. ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದಿದ್ದಾರೆ.
ಚೀನದಲ್ಲಿ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿರುವ ಹ್ಯೂಮನ್ ಮೆಟಾನ್ಯೂಮೋ ವೈರಸ್ ಅಥವಾ ಎಚ್​ಎಂಪಿವಿ ಹೊಸದೇನಲ್ಲ. ಇದನ್ನು ಮೊದಲು 2001 ರಲ್ಲಿ ಕಂಡುಹಿಡಿಯಲಾಯಿತು ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಹೇಳಿದೆ. ಆದಾಗ್ಯೂ, ಕೆಲವು ಸೆರೋಲಾಜಿಕ್ ಪುರಾವೆಗಳು ವೈರಸ್ 1958ರಿಂದಲೇ ಈ ವೈರಸ್‌ ವ್ಯಾಪಕವಾಗಿ ಹರಡಿತ್ತು ಎಂಬುದನ್ನು ನಿರೂಪಿಸಿರುವುದಾಗಿ ತಜ್ಞರು ಹೇಳಿದ್ದಾರೆ.
ಎಚ್​ಎಂಪಿವಿ ವೈರಸ್ ಹರಡುವಿಕೆ ತಡೆಗೆ ಯಾವುದೇ ಲಸಿಕೆ ಇಲ್ಲ. ಭಾರತದಲ್ಲಿ ಸದ್ಯ ಯಾವುದೇ ರೀತಿಯಲ್ಲಿ ಆತಂಕ ಪಡಬೇಕಾದ ಅಗತ್ಯ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top