ವಿಟ್ಲ: ಸುಬ್ರಹ್ಮಣ್ಯ ಮಂಜೇಶ್ವರ ಹೆದ್ದಾರಿಯ ಪುಣಚದಲ್ಲಿ ರಿಕ್ಷಾವೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಂದಕಕ್ಕೆ ಬಿದ್ದ ಘಟನೆ ಸೋಮವಾರ ನಡೆದಿದೆ.
ಪುಣಚ ಪೇಟೆಯಿಂದ ಗರಡಿ ಕಡೆಗೆ ಹೋಗುತ್ತಿದ್ದ ದ್ವಿಚಕ್ರವಾಹನಕ್ಕೆ ಬುಳೇರಿಕಟ್ಟೆ ಕಡೆಯಿಂದ ಬಂದ ರಿಕ್ಷಾ ಗುದ್ದಿದೆ. ಗುದ್ದಿದ ಪರಿಣಾಮ ರಿಕ್ಷಾ ಚಾಲಕ ನಿಯಂತ್ರಣ ಕಳೆದುಕೊಂಡು ಬಲ ಬದಿಗೆ ಹೋಗಿ ಚರಂಡಿಗೆ ಬಿದ್ದಿದೆ. ರಿಕ್ಷಾ ಹಾಗೂ ದ್ವಿಚಕ್ರವಾಹನ ಜಖಂಗೊಂಡಿದೆ.
ಅಪಘಾತದ ತೀವ್ರತೆಗೆ ದ್ವಿಚಕ್ರವಾಹನದಿಂದ ಬಾಲಕ ರಸ್ತೆಗೆ ಎಸೆಯಲ್ಪಟ್ಟಿದ್ದು. ಕೆಲ ಕಾಲ ಆತಂಕ ಮೂಡಿಸಿತ್ತು. ರಿಕ್ಷಾ ಚಾಲಕ ಅತಿಯಾದ ವೇಗ ಹಾಗೂ ಅಜಾಗರೂಕತೆಯಿಂದ ಚಲಾಯಿಸಿಕೊಂಡು ಬಂದಿರುವುದೇ ಅಪಘಾತಕ್ಕೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.