ಪುತ್ತೂರು: ಬೈಕ್ ಹಾಗೂ ಕೆಎಸ್ ಆರ್ ಟಿ ಸಿ ಬಸ್ ಡಿಕ್ಕಿ ಹೊಡೆದ ಘಟನೆ ಪುತ್ತೂರು ಕೊಡಿಮರ ರಸ್ತೆಯ ಕೊಲ್ಯ ಎಂಬಲ್ಲಿ ನಡೆದಿದೆ.
ಅಪಘಾತದ ಪರಿಣಾಮ ಬೈಕ್ ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಸವಾರರು ಗಂಭೀರ ಗಾಯಗೊಂಡಿದ್ದು ಗಾಯಗೊಂಡವರನ್ನು ವಿದ್ಯಾರ್ಥಿಗಳಾದ ಬೆಳ್ಳಿಪ್ಪಾಡಿಯ ನಿಶಾಂತ್ ಮತ್ತು ಕಾರ್ತಿಕ್ ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.