ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ

ಪುತ್ತೂರು : ಪುತ್ತೂರು ನಗರಸಭೆ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರದ ಪುರಷ್ಕೃತ ಯೋಜನೆಯಡಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮ ಬನ್ನೂರು ನೆಕ್ಕಿಲ ಘನತ್ಯಾಜ್ಯ ವಿಲೇವಾರಿ ಘಟಕದಲ್ಲಿ ಮಂಗಳವಾರ ನಡೆಯಿತು.

ಶಾಸಕ ಅಶೋಕ್ ಕುಮಾರ್ ರೈ ಶಿಲಾನ್ಯಾಸ ನೆರವೇರಿಸಿ ಮಾತನಾಡಿ, ಬೆಳೆಯುತ್ತಿರುವ ಪುತ್ತೂರು ನಗರದಲ್ಲಿ ದಿನದಿಂದ ದಿನಕ್ಕೆ ವಾಣಿಜ್ಯ ಕಟ್ಟಡಗಳು ಸಹಿತ ಇನ್ನಿತರ ಕಟ್ಟಡಗಳು ನಿರ್ಮಾಣವಾಗುತ್ತಿದ್ದು, ಮೂಲಭೂತ ಸೌಕರ್ಯಗಳಲ್ಲಿ ಒಂದಾದ ಒಳಚರಂಡಿ ವ್ಯವಸ್ಥೆ ಅತೀ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಒಟ್ಟು ಹೆಜ್ಜೆ ಮುಂದೆ ಹೋಗಿ ಸ್ವಚ್ಛತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ತ್ಯಾಜ್ಯ ವಿಲೇವಾರಿಗೆ ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಯೋಜನೆ ಶ್ಲಾಘನೀಯ. ಅದರಂತೆ ಗ್ರಾಮೀಣ ಪ್ರದೇಶದಲ್ಲೂ ತ್ಯಾಜ್ಯ ಸಂಸ್ಕರಣಾ ಘಟಕಗಳ ಅವಶ್ಯಕತೆಯಿದೆ. ಮುಂದೆ ವಿವಿಧ ಕಂಪೆನಿಗಳು ತ್ಯಜ್ಯದಿಂದಾಗುವ ಆರ್ಥಿಕ ದೃಷ್ಟಿಯನ್ನಿಟ್ಟುಕೊಂಡು ತ್ಯಾಜ್ಯ ವಿಿತು ಮುಂದೆ ಬರುವ ಎಲ್ಲಾ ಲಕ್ಷಣಗಳಿವೆ ಎಂದು ಹೇಳಿದರು.

ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ ಮಾತನಾಡಿ, ಈ ಯೋಜನೆ ಮಾನವನ ಜನಜೀವನದ ಸುಧಾರಣೆಯ ಯೋಜನೆಯಾಗಿದೆ. ಮುಖ್ಯವಾಗಿ ತ್ಯಾಜ್ಯ ವಿಲೇವಾರಿ ನಿಟ್ಟಿನಲ್ಲಿ ಅದಕ್ಕೊಂದು ಮೌಲ್ಯ ಬರಬೇಕು. ಈ ನಿಟ್ಟಿನಲ್ಲಿ ಈ ಯೋಜನೆ ಸಹಕಾರಿಯಾಗಲಿದೆ. ಇದು ರಾಜ್ಯಕ್ಕೆ ಹೆಸರು ತರುವ ಯೋಜನೆಯಾಗಲಿ ಎಂದರು.































 
 

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ ಮಾತನಾಡಿ, ಜಿಲ್ಲಾ ಕೇಂದ್ರವಾಗಲಿರುವ ಪುತ್ತೂರಿಗೆ ತ್ಯಾಜ್ಯ ವಿಲೇವಾರಿ ಅತೀ ಮುಖ್ಯವಾಗಿದೆ. ಇಂದು ಶಿಲಾನ್ಯಾಸಗೊಂಡಿರುವ ಯೋಜನೆಯಿಂದ ತ್ಯಜ್ಯಮುಕ್ತ ನಗರವಾಗುವಲ್ಲಿ ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ತ್ಯಾಜ್ಯ ವಿಲೇವಾರಿಯಲ್ಲಿ ಸಹಕಾರ ನೀಡುತ್ತಿರುವ ರೋಟರಿ, ಮುಳಿಯ ಸಂಸ್ಥೆ, ಪೌರ ಕಾರ್ಮಿಕರು, ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ವೇದಿಕೆಯಲ್ಲಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಉಪಸ್ಥಿತರಿದ್ದರು. ಸ್ಥಳೀಯ ನಗರಸಭೆ ಸದಸ್ಯೆ ಗೌರಿ ಬನ್ನೂರು ಸ್ವಾಗತಿಸಿದರು. ಸಿಬ್ಬಂದಿ ವಾಣಿ ಪ್ರಾರ್ಥನೆ ಹಾಡಿದರು. ಶಿಕ್ಷಕ ಬಾಲಕೃಷ್ಣ ಪೊರ್ದಾಳ್ಕಾರ್ಯಕ್ರಮ ನಿರೂಪಿಸಿದರು. ಸಮಾರಂಭದಲ್ಲಿ ನಗರಸಭೆ ಅಧಿಕಾರಿಗಳು, ಪೌರ ಕಾರ್ಮಿಕರು, ಸಿಬ್ಬಂದಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ಸ್ವಚ್ಛ ಮಿಶನ್ 2.0 ರ ಯೋಜನೆಯಡಿ 3.45 ಕೋಟಿ ರೂ. ವೆಚ್ಚದಲ್ಲಿ ಪಾರಂಪರಿಕ ತ್ಯಾಜ್ಯ ವಿಲೇವಾರಿ 1.68 ಕೋಟಿ ರೂ. ವೆಚ್ಚದಲ್ಲಿ ಒಣ ತ್ಯಾಜ್ಯ ಸಂಸ್ಕರಣೆಗಾಗಿ ಮೆಟಿರಿಯಲ್ ರಿಕವರಿ ಫೆಸಿಲಿಟಿ, 1.0 ರ ಯೋಜನೆಯಡಿ 36.62 ಲಕ್ಷ ರೂ. ವೆಚ್ಚದಲ್ಲಿ 30 ಕೆಎಲ್ಡಿ ಸಾಮರ್ಥ್ಯದ ಎಸ್ಟಿಪಿ ಘಟಕ, 2.0 ರ ಯೋಜನೆಯಡಿ 9.60 ಲಕ್ಷ ರೂ. ವೆಚ್ಚದಲ್ಲಿ ಸ್ಯಾನಿಟರಿ ಲ್ಯಾಂಡ್ ಫಿಲ್ಘಟಕ ನಿರ್ಮಾಣ, 15ನೇ ಹಣಕಾಸು ಹಾಗೂ ನಗರಸಭೆ ಸ್ವಂತ ನಿಧಿಯಡಿ 29 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ, 36 ಲಕ್ಷ ರೂ. ವೆಚ್ಚದಲ್ಲಿ ಘನತ್ಯಾಜ್ಯ ಘಟಕಕ್ಕೆ 400 ಕೆವಿ ಸಾಮರ್ಥ್ಯದ ಹೆಚ್ಚುವರಿ ವಿದ್ಯುತ್ ಹೊರೆ ಕಾಮಗಾರಿ ಹಾಗೂ ಅಮೃತ ನಗರೋತ್ಥಾನ ಹಂತ-4 ರ ಯೋಜನೆಯಡಿ 1.22 ಕೋಟಿ ರೂ. ವೆಚ್ಚದಲ್ಲಿ ಪೌರ ಕಾರ್ಮಿಕರ ಗೃಹ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಲಾಯಿತು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top