ಕಡಬ : ವಿದ್ಯುತ್ ಶಾರ್ಟ್ ಸಕ್ಯೂಟ್‌ನಿಂದ ಮನೆ ಸಂಪೂರ್ಣವಾಗಿ ಸುಟ್ಟಿರುವ ಘಟನೆ ಕಡಬ ತಾಲೂಕು ಆಲಂಕಾರು ಗ್ರಾಮದ ನೆಕ್ಕಿಲಾಡಿಯಲ್ಲಿ ನಡೆದಿದೆ.
ವಿನೋದಾ ಎಂಬವರ ಮನೆ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.
ಸುಮಾರು ರಾತ್ರಿ 8 ರ ವೇಳೆ ವಿದ್ಯುತ್ ಶಾರ್ಟ್ ಸಕ್ಯೂಟ್ ಸಂಭವಿಸಿದೆ. ಈ ವೇಳೆ ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ವಿನೋದ ಅವರ ಮನೆ ಕಡೆ ತೆರಳಿ ನೋಡಿದಾಗ ಬೆಂಕಿ ಮನೆಯೊಳಗೆ ಆವರಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ತಕ್ಷಣ ಮನೆಯೊಡತಿಗೆ ವಿಚಾರ ತಿಳಿಸಿ ಮನೆ ಬಾಗಿಲು ಮುರಿದು ನೀರು ಹಾಕಿದ್ದರು. ಈ ವೇಳೆ ಮನೆಯ ಸೋಫಾ, ಬಟ್ಟೆ, ಮಕ್ಕಳ ಪುಸ್ತಕಗಳು ಬೆಂಕಿಗೆ ಆಹುತಿಯಾಗಿದೆ. ಹೊರಗಡೆ ಒಣಗಳು ಹಾಕಿದ್ದ ಬಟ್ಟೆ ಮಾತ್ರ ಉಳಿದಿದ್ದು, ಅಮೂಲ್ಯ ದಾಖಲೆಗಳು ಸುಟ್ಟು ಹೋಗಿದೆ ಎನ್ನಲಾಗಿದೆ.
ವಿನೋದಾ ಅವರು ಪತಿಯನ್ನು ಕಳೆದುಕೊಂಡ ಬಳಿಕ ಇಬ್ಬರು ಮಕ್ಕಳೊಂದಿಗೆ ಚಿಕ್ಕದೊಂದು ಹಂಚಿನ ಮನೆಯಲ್ಲಿ ವಾಸವಾಗಿದ್ದರು. ಮಕ್ಕಳು ತಮ್ಮ ಶಾಲೆಯ ವಾರ್ಷಿಕೋತ್ಸವಕ್ಕೆಂದು ಶಾಲೆಗೆ ಹೊಗಿದ್ದರು. ಕೂಲಿ ಕೆಲಸ ಮುಗಿಸಿ ಮಕ್ಕಳ ಕಾರ್ಯಕ್ರಮ ನೋಡುವ ಸಲುವಾಗಿ ವಿನೊದ ಅವರು ಶಾಲೆಗೆ ತೆರಳಿದ್ದರು ಅದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಕಂದಾಯ ಅಧಿಕಾರಿಗಳು, ಪಂಚಾಯತಿ ಆಡಳಿತ ಮಂಡಳಿ, ಅಧಿಕಾರಿಗಳು, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.