ಪುತ್ತೂರು : ದಾರಂದಕುಕ್ಕು ಸಮೀಪ ನಿನ್ನೆ ನಡೆದ ಬೈಕ್ ಮತ್ತು ಬಸ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ವಿದ್ಯಾರ್ಥಿಗಳಾದ ಬೆಳ್ಳಿಪ್ಪಾಡಿಯ ನಿಶಾಂತ್ ಮತ್ತು ಕಾರ್ತಿಕ್ ಅವರಿಗೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಇದರ ಸೇವಾ ಪ್ರಕಲ್ಪವಾದ ವಜ್ರತೇಜಸ್ ತಂಡದಿಂದ ಧನಸಹಾಯ ನೀಡಲಾಯಿತು.
ಗುರುವಾರ ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ವಜ್ರತೇಜಸ್ ವಾಟ್ಸ್ ಆಪ್ ಗ್ರೂಪ್ ನಲ್ಲಿ ಸಂಗ್ರಹವಾದ ಮೊದಲ ಕಂತಿನ ಮೊತ್ತವನ್ನು ಅವರ ಮನೆಯವರಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ವಜ್ರತೇಜಸ್ ಅಧ್ಯಕ್ಷ ಮುರಳೀಕೃಷ್ಣ ಹಸಂತಡ್ಕ, ವಿಶ್ವ ಹಿಂದೂ ಪರಿಷದ್ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ, ವಜ್ರತೇಜಸ್ ಕಾರ್ಯದರ್ಶಿ ಸಚಿನ್ ಶೆಣೈ, ಕೋಶಾಧಿಕಾರಿ ಗಣೇಶ್ ಕಾಮತ್, ಸದಸ್ಯರಾದ ಡಾ.ಪ್ರದೀಪ್ ಬೊರ್ಕರ್, ಡಾ.ಸುರೇಶ್ ಪುತ್ತೂರಾಯ ಮತ್ತು ಸೇಶಪ್ಪ ಬೆಳ್ಳಿಪ್ಪಾಡಿ, ಭರತ್ ಚನಿಲ ಉಪಸ್ಥಿತರಿದ್ದರು.