ಮಂಗಳೂರು : ಮಂಗಳೂರು ನಗರ ಪೊಲೀಸರ ಸಿಸಿಬಿ ಘಟಕವು ಗೋವಾದಿಂದ ಮಂಗಳೂರು ಮತ್ತು ಕೇರಳಕ್ಕೆ ಹೈಡೋವಿಡ್ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ವ್ಯಕ್ತಿಯನ್ನು ಬಂಧಿಸಿ, 73 ಲಕ್ಷ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ಬಂಧಿತ ಆರೋಪಿಯನ್ನು ಶಮೀರ್ ಪಿ.ಕೆ (42) ಎಂದು ಪತ್ತೆಹಚ್ಚಲಾಗಿದೆ.
ಬಂಧಿತ ಶಮೀರ್ ಪಿ.ಕೆಯನ್ನು ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿ ಹಿಡಿದು ಬಂದಿಸಲಾಗಿದೆ. ಆತನಿಂದ 738 ಗ್ರಾಂ ಹೈಡ್ರೋವಿಡ್ ಗಾಂಜಾ, ಕಾರು, ಮೊಬೈಲ್ ಫೋನ್ ಸೇರಿದಂತೆ ಒಟ್ಟು 80 ಲಕ್ಷ ರೂಪಾಯಿಯ ದುಬಾರಿ ವಸ್ತುಗಳನ್ನು ಪೋಲಿಸರ ಕೈ ವಶದಲ್ಲಿದೆ.
ಪೊಲೀಸರ ಪ್ರಕಾರ, ಶಮೀರ್ ವಿದೇಶದಿಂದ ಹೈಡ್ರೋವಿಡ್ ಗಾಂಜಾವನ್ನು ತರಿಸಿ, ಅದನ್ನು ಕೇರಳ ಮತ್ತು ಮಂಗಳೂರಿನಲ್ಲಿ ಮಾರಾಟ ಮಾಡುತ್ತಿದ್ದ. ಈ ಕೇಸನ್ನು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ಅವರ ಮಾರ್ಗದರ್ಶನದಲ್ಲಿ ಕಾರ್ಯಚರಣೆ ನಡೆಸಲಾಗಿದೆ.