ಹೊಸದಿಲ್ಲಿ: ಪಂಜಾಬ್‌ನ ಲುಧಿಯಾನ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕ ಗುರುಪ್ರೀತ್ ಗೋಗಿ ಆಕಸ್ಮಿಕವಾಗಿ ಗುಂಡುಸಿಡಿದು ಶುಕ್ರವಾರ ತಡರಾತ್ರಿ ಸಾವನ್ನಪ್ಪಿದ್ದಾರೆ.
ಗುರುಪ್ರೀತ್ ಗೋಗಿ (58) ಅವರ ತಲೆಗೆ ಗುಂಡು ತಗುಲಿದ ನಂತರ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಷ್ಟು ಹೊತ್ತಿಗಾಗಲೇ ಶಾಸಕರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಜಸ್ಕರ್ ಸಿಂಗ್ ತೇಜ ತಿಳಿಸಿದ್ದಾರೆ.
ಗೋಗಿ ಅವರ ಮೃತದೇಹವನ್ನು ಡಿಎಂಸಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ತಲೆಗೆ ಆಕಸ್ಮಿಕವಾಗಿ ಗುಂಡು ತಗುಲಿ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಹೇಳಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಅಸಲಿ ಕಾರಣ ಗೊತ್ತಾಗಲಿದೆ ಎಂದು ತೇಜ ಹೇಳಿದ್ದಾರೆ.
























