ಪುತ್ತೂರು: ದೆಹಲಿಯ ಗಣರಾಜ್ಯೋತ್ಸವ ಪರೇಡ್ ನ ಪ್ರಯುಕ್ತ ಆಯೋಜಿಸಿದ ಸತತ ಏಳು ಕ್ಯಾಂಪಿನಲ್ಲಿ ಭಾಗವಹಿಸಿ ಯಶಸ್ವಿಗೊಂಡು ಇದೀಗ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡಿಗೆ ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ (ಸ್ವಾಯತ್ತ)ದ ಎನ್.ಸಿ.ಸಿ ಘಟಕದ ಮೂವರು ವಿದ್ಯಾರ್ಥಿಗಳು ಆಯ್ಕೆಗೊಂಡಿದ್ದಾರೆ.
ಪ್ರೈಮ್ ಮಿನಿಸ್ಟರ್ ರ್ಯಾಲಿ ಯಲ್ಲಿ ಭಾಗವಹಿಸಲು ಗೊಳಿತ್ತಡಿ ನಿವಾಸಿ ರುಕ್ಮಯ ಮತ್ತು ಗೀತಾ ದಂಪತಿ ಪುತ್ರ, ದ್ವಿತೀಯ ಬಿಕಾಂ ವಿದ್ಯಾರ್ಥಿ ಜೂನಿಯರ್ ಅಂಡರ್ ಆಫೀಸರ್ ಸುಜಿತ್, ಕರ್ತವ್ಯಪಥ್ ನಲ್ಲಿ ಪಾಲ್ಗೊಳ್ಳಲು ಬೊಂಡಾಲ ನಿವಾಸಿ ಉದಯಕುಮಾರ್ ಮತ್ತು ವನಿತಾ ದಂಪತಿ ಪುತ್ರಿ, ತೃತೀಯ ಬಿಸಿಎ ವಿದ್ಯಾರ್ಥಿನಿ ಜೂನಿಯರ್ ಅಂಡರ್ ಆಫೀಸರ್ ಲಹರಿ ಮತ್ತು ಸಾಂಸ್ಕೃತಿಕ ವಿಭಾಗದಲ್ಲಿ ಸುಳ್ಯ ನಿವಾಸಿ ರವಿಪ್ರಕಾಶ್ ಮತ್ತು ಜಯಶ್ರೀ ಆರ್ ಪ್ರಕಾಶ್ ದಂಪತಿ ಪುತ್ರಿ ಕಾರ್ಪೊರಲ್ ಶುಭದ ಆರ್. ಪ್ರಕಾಶ್ ಆಯ್ಕೆಗೊಂಡ ವಿದ್ಯಾರ್ಥಿಗಳು.
ವಿವೇಕಾನಂದ ಕಾಲೇಜಿನ ಇತಿಹಾಸದಲ್ಲಿ ಮೊದಲ ಬಾರಿಗೆ ಮೂವರು ವಿದ್ಯಾರ್ಥಿಗಳು ಆರ್ ಡಿಸಿ ಪರೇಡ್ ನಲ್ಲಿ ಭಾಗವಹಿಸಲು ಆಯ್ಕೆಗೊಂಡಿರುವುದು ಕಾಲೇಜಿಗೆ ಹೆಮ್ಮೆಯ ವಿಷಯವಾಗಿದೆ.
ಇವರಿಗೆ ಎನ್‌ಸಿಸಿ ಘಟಕದ ಅಧಿಕಾರಿ ಲೆ.ಭಾಮಿ ಅತುಲ್ ಶೆಣೈ ತರಬೇತಿ ನೀಡಿರುತ್ತಾರೆ. ಕಾಲೇಜಿನ ಪ್ರಿನ್ಸಿಪಾಲ್ ಪ್ರೊ.ವಿಷ್ಣು ಗಣಪತಿ ಭಟ್ ಮತ್ತು ಎನ್‌ಸಿಸಿ ಘಟಕ, ಆಡಳಿತ ಮಂಡಳಿ, ಐಕ್ಯೂಎಸಿ ಘಟಕ, ಉಪನ್ಯಾಸಕ ಮತ್ತು ಉಪನ್ಯಾಸಕೇತರ ವೃಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.