ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ : ಎರಡು ನಾಮಪತ್ರ ತಿರಸ್ಕೃತ | ಅಧಿಕಾರಿಯನ್ನು ತರಾಟೆಗೆತ್ತಿಕೊಂಡ ಶಾಸಕರು

ಪುತ್ತೂರು: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು, ಈ ವಿಚಾರಕ್ಕೆ ಸಂಬಂದಿಸಿದಂತೆ ಭಾನುವಾರ ಶಾಸಕರು ಗರಂ ಆಗಿ ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ತಿಕೊಂಡರು.

 ಪಿಎಲ್ ಡಿ ಬ್ಯಾಂಕಿನ ಚುನಾವಣೆಗೆ ಒಟ್ಟು ಸಲ್ಲಿಕೆಯಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಸದಸ್ಯರಾದ ರಾಜಶೇಖರ ಜೈನ್ ಮತ್ಗು ಅಶೋಕ್ ರೈ ದೇರ್ಲ ಎಂಬವರ ನಾಮಪತ್ರವನ್ನು ಚುನಾವಣಾ ಅಧಿಕಾರಿ ಎ ಆರ್ ಒ ರಘು ಎಂಬವರು ತಿರಸ್ಕೃತಗೊಳಿಸಿದ್ದರು. ಸಕಾರಣವಿಲ್ಲದೆ ಮತ್ತು ಉದ್ದೇಶಪೂರ್ವಕವಾಗಿ ನಮ್ಮ ನಾಮಪತ್ರವನ್ನು ತಿರಸ್ಕಾರ ಮಾಡಿದ್ದಾರೆ ಎಂದು ಇಬ್ಬರು ಅಭ್ಯರ್ಥಿಗಳು ಬ್ಲಾಕ್ ಅಧ್ಯಕ್ಷ ಕೆ.ಪಿ. ಆಳ್ವರ ಗಮನಕ್ಕೆ ತಂದಿದ್ದಾರೆ. ಕೆ ಪಿ ಆಳ್ವರು ಶಾಸಕರ ಗಮನಕ್ಕೆ ತಂದು ಬಳಿಕ ಶಾಸಕರು ಬ್ಯಾಂಕಿಗೆ ತೆರಳಿ ಚುನಾವಣಾ ಅಧಿಕಾರಿಯನ್ನು ತರಾಟೆಗೆ ಎತ್ಗಿಕೊಂಡರು. ಸಲ್ಲಿಸಲಾಗಿದ್ದ ನಾಮಪತ್ರವನ್ನು ಪರಿಶೀಲನೆ ಮಾಡುವ ವೇಳೆ ಅದು ಸರಿಯಾಗಿಯೇ ಇತ್ತು, ಯಾವುದೇ ಕಾರಣವಿಲ್ಲದೆ ದುರುದ್ದೇಶದಿಂದ ಅಧಿಕಾರಿ ಈ ಕೆಲಸ ಮಾಡಿದ್ದಾರೆ ಎಂದು ಶಾಸಕರು ನೇರ ಆರೋಪ ಮಾಡಿದರು.

ಈ ಸಂದರ್ಭದಲ್ಲಿ ಅಧಿಕಾರಿ ಪ್ರತಿಕ್ರಿಯೆ ನೀಡಿ, ನಾಮಪತ್ರ ಸಲ್ಲಿಸುವ ವೇಳೆ ಸ್ಪರ್ದಿಸುವ ಅಭ್ಯರ್ಥಿ ಯಾವ ಕೆಟಗರಿಯಲ್ಲಿ ಸ್ಪರ್ದೆ ಮಾಡುತ್ತಿದ್ದಾರೆ ಎಂಬ ವಿಚಾರವನ್ನು ನಾಮಪತ್ರದಲ್ಲಿ‌ ನಮೂದಿಸಬೇಕು, ನಮೂದಿಸಿದ ಬಳಿಕ ಉಳಿದ ಕೆಟಗರಿ ಹೆಸರನ್ನು ಅಳಿಸಬೇಕು. ಅಳಿಸದ ಕಾರಣ ನಾಮಪತ್ರ ತಿರಸ್ಕಾರ ಮಾಡಿದ್ದೇನೆ ಎಂದು‌ ಶಾಸಕರಲ್ಲಿ ತಿಳಿಸಿದ್ದಾರೆ. ಇದಕ್ಕೆ ಉತ್ತರಿಸಿದ ಶಾಸಕರು, ಕಾನೂನು ಪ್ರಕಾರ ಅಭ್ಯರ್ಥಿಯು ತಾನು ಸ್ಪರ್ಧಿಸುವ ವಿಭಾಗಕ್ಕೆ ರೈಟ್ ಗುರುತು ಹಾಕಬೇಕು ಎಂದು ಇದ್ದು ಉಳಿದ ಕೆಟಗರಿಯನ್ನು ಅಳಿಸಬೇಕೆಂಬ ನಿಯಮವಿರುವುದಿಲ್ಲ. ಆದರೆ ಅಧಿಕಾರಿ ಈ ವಿಚಾರದಲ್ಲಜ ತಪ್ಪು ಮಾಡಿರುವುದು ಸಾಭೀತಾಗಿದೆ ಎಂದು ಶಾಸಕರು ಹೇಳಿದರು.































 
 

ನಾಮಪತ್ರ ತಿರಸ್ಕಾರ ಮಾಡಲು ಎಷ್ಟು ಲಂಚ‌ ತಗೊಂಡಿದ್ದೀರಿ ಎಂದು ಅಧಿಕಾರಿ ರಘು ಅವರನ್ನು ಪ್ರಶ್ನಿಸಿದ ಶಾಸಕ ಅಶೋಕ್ ರೈ, ನಾನು ಪುತ್ತೂರಿನಲ್ಲಿ ಯಾರಿಗೂ ಅನ್ಯಾಯ ಆಗಲು ಬಿಡುವುದಿಲ್ಲ. ಲಂಚ ತಗೊಂಡು  ಮೋಸ ಮಾಡಲು ಬಿಡುವುದಿಲ್ಲ. ಉದ್ದೇಶಪೂರ್ವಕವಾಗಿ ಈ ಕೃತ್ಯ ಮಾಡಿದ್ದೀರಿ ಎಂದು ಮತ್ತೆ ಅಧಿಕಾರಿಯನ್ನು‌ತರಾಟೆಗೆ ಎತ್ತಿಕೊಂಡರು. ನಿಮ್ಮ‌ಮೇಲೆ‌ ಮೊದಲೇ ನನಗೆ ದೂರು ಬಂದಿತ್ತು, ಸುಧಾರಿಸಬಹುದು ಎಂದು ಸುಮ್ಮನಿದ್ದೆ ಈಗ ಬಣ್ಣ ಬಯಲಾಯಿತು ಎಂದು ಶಾಸಕರು ಅಧಿಕಾರಿಯನ್ನು ಎಚ್ಚರಿಸಿದರು. ಲಂಚ ತಗೊಂಡು‌,ಅನ್ಯಾಯ‌ಮಾಡಿದ‌ ನಿಮ್ಮ‌ನ್ನು‌ ಸಸ್ಪೆಂಡ್ ಮಾಡಿಸ್ತೇನೆ.‌ ನಿಮಗೆ ಬೇಕಾದ ಹಾಗೆ ಕಾನೂನು ಬದಲಾವಣೆ ಮಾಡುವ ಅಧಿಕಾರ ಇಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸ್ಪರ್ಧಾಳು ರಾಜಶೇಖರ್ ಜೈನ್ ಮಾತನಾಡಿ, ನಮ್ಮ ಇಬ್ಬರ ನಾಮಪತ್ರ ಸರಿಯಾಗಿಯೇ ಇದೆ. ಕಾರಣವಿಲ್ಲದೆ ತಿರಸ್ಕಾರ ಮಾಡಿದ್ದಾರೆ. ಇದಕ್ಕಾಗಿ ನಾವು ಶಾಸಕರಲ್ಲಿ ದೂರು ನೀಡಿರುವುದಾಗಿ ಹೇಳಿದರು.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top