ಪುತ್ತೂರು : ದ.ಕ.ಜಿಲ್ಲಾ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿ 5 ಲಕ್ಷ ರೂ. ಅನುದಾನದಲ್ಲಿ ಚರಂಡಿ ಹಾಗೂ ಸ್ಲ್ಯಾಬ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ಸೋಮವಾರ ಪರ್ಲಡ್ಕ ಸರಕಾರಿ ಶಾಲಾ ಆವರಣದಲ್ಲಿ ನಡೆಯಿತು.
ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಶಂಕುಸ್ಥಾಪನೆ ನೆರವೇರಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾ ಆರ್.ಗೌರಿ, ಪುತ್ತೂರು ನಗರಸಭೆ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ, ಉಪಾಧ್ಯಕ್ಷ ಬಾಲಚಂದ್ರ ಕೆಮ್ಮಿಂಜೆ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ತ, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ., ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಚಂದ್ರಶೇಖರ ರಾವ್ ಬಪ್ಪಳಿಗೆ, ಜಯಶ್ರೀ ಶೆಟ್ಟಿ, ಶಶಿಕಲಾ, ಪ್ರಸನ್ನ ಕುಮಾರ್, ಶಾಲಾ ಎಸ್ ಡಿಎಂಸಿ ಪದಾಧಿಕಾರಿಗಳು, ಕಾರ್ಯಕರ್ತರು, ಸ್ಥಳೀಯರು ಉಪಸ್ಥಿತರಿದ್ದರು.