ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯದ ಕೆಲಿಂಜ ಗ್ರಾಮದಲ್ಲಿ ಪವಿತ್ರ ಕಾರ್ಯಕ್ರಮಕ್ಕೆ ಪೂರಕವಾಗಿ ಗ್ರಾಮದಲ್ಲಿರುವ ನೆಟ್ಲ ಶ್ರೀ ಸದಾಶಿವೇಶ್ವರ, ನರಹರಿ ಶ್ರೀ ಸದಾಶಿವೇಶ್ವರ ದೇವಸ್ಥಾನಗಳ ಆವರಣವನ್ನು ಶ್ರಮದಾನದ ಮೂಲಕ ಇಂದು ಸ್ವಚ್ಛತೆ ಮಾಡಲಾಯಿತು.
ಶ್ರೀ ಕ್ಷೇತ್ರಗಳ ಕುರಿತು ಜಾಗೃತಿ ಮೂಡಿಸುವುದು ಹಾಗೂ ಸ್ವಚ್ಚತೆಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಸುಮಾರು 7 ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಗಳನ್ನು ನಡೆಸಿದ್ದು, ಸುಮಾರು 230 ಸದಸ್ಯರು ಭಾಗವಹಿಸಿದ್ದರು.
ಸ್ವಚ್ಛತಾ ಕಾರ್ಯದಲ್ಲಿ ದೇವಸ್ಥಾನದ ಟ್ರಸ್ಟಿಗಳು, ಜನ ಪ್ರತಿನಿಧಿಗಳು ,ಯೋಜನೆಯ ಕಲ್ಲಡ್ಕ ವಲಯದ ಮೇಲ್ವಿಚಾರಕಿ ಸುಗುಣ ಶೆಟ್ಟಿ, ಒಕ್ಕೂಟದ ಪದಾಧಿಕಾರಿಗಳು, ಸೇವಾ ಪ್ರತಿನಿಧಿಗಳಾದ ಗಣೇಶ್, ಸುಕನ್ಯಾ, ವಿಜಯ, ಲೀಲಾವತಿ, ವಿದ್ಯಾ, ಉಪಸ್ಥಿತರಿದ್ದರು.