ಕಡಬ: ಅಕ್ರಮ ದನ ಸಾಗಾಟದ ಲಾರಿಯನ್ನು ಕಡಬ ಠಾಣಾ ಪೊಲೀಸರು ತಡೆಹಿಡಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಬಳಿ ನಡೆದಿದೆ.
ಲಾರಿ ತಡೆಹಿಡಿದ ಸಂದರ್ಭ ಲಾರಿ ಚಾಲಕ ಪರಾರಿಯಾಗಿರುವುದಾಗಿ ತಿಳಿದು ಬಂದಿದೆ.
ಇಂದು ಮುಂಜಾನೆ ಘಟನೆ ನಡೆದಿದ್ದು, ಸ್ಥಳದಲ್ಲಿ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಜಮಾಯಿಸಿದ್ದಾರೆ. ಪಿಕಪ್ ವಾಹನದಲ್ಲಿ ಸುಮಾರು ಎಂಟು ಜಾನುವಾರುಗಳಿದ್ದು, ಒಂದು ದನ ಮೃತಪಟ್ಟಿರುವುದಾಗಿ ಮಾಹಿತಿ ಲಭಿಸಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಲ್ಲದೆ ಅಕ್ರಮ ಜಾನುವಾರು ಸಾಗಾಟಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.