ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ

ಕಾರು ಜಖಂ; ಸಹೋದರ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯ

ಬೆಳಗಾವಿ: ಕಾರು ಅಪಘಾತದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಮುಖಕ್ಕೆ ಗಾಯವಾಗಿದ್ದು, ಬೆಳಗಾವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್‌ ಹಾಗೂ ಸಹೋದರ ಚೆನ್ನರಾಜ ಹಟ್ಟಿಹೊಳಿ ಪ್ರಯಾಣಿಸುತ್ತಿರುವ ಕಾರು ಇಂದು ಮುಂಜಾನೆ ಹೊತ್ತು ಬೆಳಗಾವಿ ಸಮೀಪ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿವರು ಕಾರಿನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ಕಾರಿನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ. ನಾಯಿ ಅಡ್ಡ ಬಂದಾಗ ಅದು ಅಡಿಗೆ ಬೀಳುವುದನ್ನು ತಪ್ಪಿಸಲು ಹೋಗಿ ಕಾರು ರಸ್ತೆಬದಿಯಲ್ಲಿರುವ ಮರಕ್ಕೆ ಡಿಕ್ಕಿ ಹೊಡೆದಿದೆ. ಬೆಳಗ್ಗೆ ಆರು ಘಂಟೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ.































 
 

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದಾಖಲಾಗಿದ್ದಾರೆ. ಸಿಎಲ್‌ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. ಅಂಬಡಗಟ್ಟಿ ಗ್ರಾಮದ ಬಳಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿಯಾಗಿದೆ.ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಎಂಎಲ್​ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯಯಾಗಿದೆ ಎಂದು ತಿಳಿದುಬಂದಿದೆ.

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top