ಮಂಗಳೂರು : ದಕ್ಷಿಣ ಭಾರತ ಮಾಸ್ಟರ್ಸ್ ಅಥ್ಲೆಟಿಕ್ಸ್ ಅಸೋಸಿಯೇಷನ್ ವತಿಯಿಂದ ಜ.10ರಿಂದ ಜ.12ರವರೆಗೆ ಮಂಗಳೂರಿನ ಮಂಗಳಾ ಕ್ರೀಡಾಂಗಣದಲ್ಲಿ ಒಂದನೇ ದಕ್ಷಿಣ ಏಷ್ಯಾ ಮಾಸ್ಟರ್ಸ್ ಅಥ್ಲೆಟಿಕ್ಸ್ ಕ್ರೀಡಾಕೂಟ ನಡೆಯಿತು.
ಇದರಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ ವೆಂಕಟೇಶ್ ಪ್ರಸಾದ್ ದರ್ಬೆತ್ತಡ್ಕ 45ರ ವಯೋಮಾನದ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿ, 400 ಮೀ ಹರ್ಡಲ್ಸ್ ಮತ್ತು ಹೈಜಂಪ್ ನಲ್ಲಿ 4ನೇ ಸ್ಥಾನ ಹಾಗೂ 110 ಮೀ ಹರ್ಡಲ್ಸ್ ನಲ್ಲಿ 5ನೇ ಸ್ಥಾನ ಗಳಿಸಿದ್ದಾರೆ.
ಈ ಕ್ರೀಡಾಕೂಟದಲ್ಲಿ ಭಾರತ ಮಾತ್ರವಲ್ಲದೇ ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ, ಭೂತಾನ್ ದೇಶಗಳ ವಿವಿಧ ವಯೋಮಾನದವರಾದ 1700ಕ್ಕೂ ಅಧಿಕ ಕ್ರೀಡಾಪಟುಗಳು ಭಾಗವಹಿಸಿದ್ದಾರೆ.