ಹತ್ಯೆಗೆ ಸಂಚು ರೂಪಿಸಿರುವ ಕುರಿತು ಗುಪ್ತಚರ ಪಡೆ ಮಾಹಿತಿ
ಹೊಸದಿಲ್ಲಿ : ಆಮ್ ಆದ್ಮಿ ಪಕ್ಷದ ಸಂಚಾಲಕ ಹಾಗೂ ದಿಲ್ಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ದಾಳಿ ನಡೆಸಲು ಖಲಿಸ್ಥಾನಿ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ. ದಿಲ್ಲಿ ಚುನಾವಣೆ ವೇಳೆ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರ ಮೇಲೆ ದಾಳಿ ನಡೆಯುವ ಸಾಧ್ಯತೆ ಇದೆ ಎಂದು ಗುಪ್ತಚರ ಪಡೆ ಎಚ್ಚರಿಕೆ ನೀಡಿದೆ.
ಖಲಿಸ್ಥಾನಿ ಭಯೋತ್ಪಾದಕರು ದಿಲ್ಲಿ ಚುನಾವಣೆ ಹಾಳುಗೆಡವಲು ನಾಯಕರ ಮೇಲೆ ದಾಳಿ ಮಾಡಬಹುದು ಎಂದು ಹೇಳಲಾಗಿದೆ. ಗುಪ್ತಚರ ಪಡೆ ದಿಲ್ಲಿ ಪೊಲೀಸರೊಂದಿಗೆ ಈ ಮಾಹಿತಿಯನ್ನು ಹಂಚಿಕೊಂಡಿವೆ. ಅರವಿಂದ್ ಕೇಜ್ರಿವಾಲ್ ಅವರಿಗೆ ಝಡ್ ಕೆಟಗರಿ ಭದ್ರತೆ ಇದೆ.
ಖಲಿಸ್ಥಾನಿ ಉಗ್ರರ ಹಿಟ್‌ಲಿಸ್ಟ್‌ನಲ್ಲಿ ಅರವಿಂದ ಕೇಜ್ರಿವಾಲ್ ಸೇರಿ ಹಲವು ನಾಯಕರು ಇದ್ದಾರೆ. ಸಾರ್ವಜನಿಕ ಸಭೆಗಳಲ್ಲಿ ಅಥವಾ ರೋಡ್‌ಶೋ ವೇಳೆ ನಾಯಕರ ಮೇಲೆ ದಾಳಿಯಾಗುವ ಸಾಧ್ಯತೆಯಿದೆ. ಹೀಗಾಗಿ ಭದ್ರತೆಗೆ ವಿಶೇಷ ವ್ಯವಸ್ಥೆ ಮಾಡಬೇಕೆಂದು ಸೂಚಿಸಲಾಗಿದೆ.
ಫೆಬ್ರವರಿ 5ರಂದು ದೆಹಲಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ, ಫೆ.8ರಂದು ಫಲಿತಾಂಶ ಪ್ರಕಟವಾಗಲಿದೆ.