ಬೆಂಗಳೂರು: ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ (76) ಕೆಲ ದಿನಗಳ ಅನಾರೋಗ್ಯದಿಂದ ಇಂದು ಬೆಳಿಗ್ಗೆ ನಿಧನರಾದರು.
ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿದ್ದು,ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು ನಿಧನ ಹೊಂದಿದ್ದಾರೆ
ವಿಜಿ ಅವರದ್ದು ಬಲು ಸುದೀರ್ಘವಾದ ಸಿನಿಮಾ ಮತ್ತು ರಂಗಭೂಮಿ ಪಯಣ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ ಅವರ ‘ಸಂಸಾರದಲ್ಲಿ ಸರಿಗಮ’ ನಾಟಕ ಬಹಳ ಹೆಸರು ಕೊಟ್ಟಿತ್ತು. ಇದೇ ಕಾರಣಕ್ಕೆ ಅವರಿಗೆ ಸರಿಗಮ ವಿಜಿ ಹೆಸರು ಬಂದಿತ್ತು. ನಾಟಕದಿಂದ ಸಿನಿಮಾಕ್ಕೆ ಪಾದಾರ್ಪಣೆ ಮಾಡಿದ ವಿಜಿ ಅವರು ಹಲವಾರು ಸಿನಿಮಾಗಳಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರ ಕೆಲವೆಡೆ ವಿಲನ್ ಪಾತ್ರಗಳಲ್ಲಿಯೂ ನಟಿಸಿದ್ದಾರೆ.