ಪುತ್ತೂರು: ತಾಲೂಕು ಮಟ್ಟದ ನಾಟಕ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳ ಎರಡೂ ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ನೆಲ್ಲಿಕಟ್ಟೆ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ನಾಟಕ ಪ್ರದರ್ಶನಗೊಂಡಿತ್ತು.
ತಂಡವನ್ನು ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಶಿಕ್ಷಕರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.