ಪುತ್ತೂರು : ಪುತ್ತೂರಿನ ಯುವ ಪ್ರತಿಭೆ ಪ್ರಣವ್ ಭಟ್ ತಾಲೂಕು ಯುವ ಸಾಧಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕಳೆದ ಎರಡು ವರ್ಷಗಳಿಂದ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆಸಲ್ಪಡುವ ‘ಕನ್ನಡದಲ್ಲೂ ಐ.ಎ.ಎಸ್ ಬರೆಯಿರಿ’ ಅಭಿಯಾನದಲ್ಲಿ ಐ.ಎ.ಎಸ್- ಐ.ಪಿ.ಎಸ್ ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾದ ಮಾಹಿತಿಯನ್ನು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡುತ್ತಾ ಬಂದಿರುವ ಯುವ ಪ್ರೇರಕ ಭಾಷಣಗಾರ ಪ್ರಣವ್ ಭಟ್ ಯುವ ಸಾಧಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಈಗಾಗಲೇ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ 22,000 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಐ.ಎ.ಎಸ್- ಐ.ಪಿ.ಎಸ್ ತತ್ಸಮಾನ ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತಾಗಿ ಮಾಹಿತಿಯನ್ನು ನೀಡಿದ್ದರು.