ಮರದ ಕೊಂಬೆಗೆ ನೇಣು ಬಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ

ಪುತ್ತೂರು : ವ್ಯಕ್ತಿಯೋರ್ವರು ಮರದ ಕೊಂಬೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಡುವನ್ನೂರು ಗ್ರಾಮದ ಪುಂಡಿಕಾಯಿಯಲ್ಲಿ ನಡೆದಿದೆ.

ಪಡುವನ್ನೂರು ಗ್ರಾಮದ ಪುಂಡಿಕಾಯಿ ನಿವಾಸಿ  ವೆಯರಿಂಗ್ ಕೆಲಸ ಮಾಡುತ್ತಿದ್ದ ಮೋಹನ್ (31)ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಅವರು ಖಾಸಗಿ ಆಸ್ಪತ್ರೆಯಿಂದ ಚಿಕಿತ್ಸೆಯನ್ನೂ ಪಡೆಯುತ್ತಿದ್ದರು. ಮೋಹನ್ ಅವರು ಜ.20ರಂದು ರಾತ್ರಿ ಊಟ ಮಾಡಿ ಮಲಗಿದವರು ಜ.21ರ ಬೆಳಗ್ಗೆ ನಾಪತ್ತೆಯಾಗಿದ್ದರು. ವಿಷಯ ಅರಿತು ಹುಡುಕಾಡಿದಾಗ ಮೋಹನ್ ಅವರು ಮನೆಯ ಪಕ್ಕದ ಪದ್ಮನಾಭ ಭಟ್ ಎಂಬವರ ಜಾಗದ ಕಾಡು ಪ್ರದೇಶದಲ್ಲಿ ಉಪ್ಪಳಿಗೆ ಮರದ ಕೊಂಬೆಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅದಾಗಲೇ ಅವರು ಮೃತಪಟ್ಟಿದ್ದು, ಮೃತರ ಸಹೋದರ ಚಿರಂಜೀವಿ ಅವರು ನೀಡಿದ ದೂರಿನಂತೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top