ಪುತ್ತೂರು: “ಸ್ವಚ್ಛ ಸಂಸ್ಕೃತಿ, ನಮ್ಮ ಸಂಸ್ಕೃತಿ” ಕಾರ್ಯಕ್ರಮ ಮೆಸ್ಕಾ ಕಾರ್ಯನಿರ್ವಾಹಕ ಇಂಜಿನಿಯರ್ ಅವರ ನೇತೃತ್ವದಲ್ಲಿ ಕಬಕ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜರುಗಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಶೀಲ ವಹಿಸಿದ್ದರು ಕಬಕ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮದ ಪಟ್ಟಿ ತಯಾರಿಸಲಾಯಿತು
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷರು ಹಾಗೂ ಎಲ್ಲಾ ಸದಸ್ಯರು,ಶ್ರೀ ಮಹಾದೇವಿ ದೇವಸ್ಥಾನದ ಅಧ್ಯಕ್ಷ ಚಂದ್ರಶೇಖರ್ ನಾಯಕ್, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯವರು, ಶಾಲಾ ಮುಖ್ಯ ಶಿಕ್ಷಕರು, ಸಂಜೀವಿನಿ ಒಕ್ಕೂಟದವರು ಹಾಗೂ ಗ್ರಾಮಸ್ಥರಾದ ಆನಂದ ನೆಕ್ಕರೆ ಭಾಗವಹಿಸಿದ್ದರು. ಬೆಳಿಗ್ಗೆ 11.00 ಗಂಟೆಗೆ ಗ್ರಾಮ ಪಂಚಾಯತ್ ಸುತ್ತ ಮುತ್ತ ಹಾಗೂ ಸಂಜೆ 3.00ಗಂಟೆ ಮುರ ಅಂಗನವಾಡಿ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು.