ಪುತ್ತೂರು: ಸಂಪ್ಯದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಮತ್ತು ಐಕ್ಯೂಎಸಿ ಸಹಯೋಗದಲ್ಲಿ 76ನೇ ವರ್ಷದ ಗಣರಾಜ್ಯೋತ್ಸವವನ್ನು ಭಾನುವಾರ ಆಚರಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಅಕ್ಷಯ ಕಾಲೇಜಿನ ಆಡಳಿತ ಅಧಿಕಾರಿ ಅರ್ಪಿತ್ ಟಿ.ಎ. ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಕಿಶೋರ್ ಕುಮಾರ್ ರೈ ಕುಮಾರಿ ಮೇಘಶ್ರೀ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ನವೀನ್ ಕುಮಾರ್ ಉಪಸ್ಥಿತರಿದ್ದರು. ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂ ಸೇವಕ -ಸೇವಕಿಯರು ಹಾಜರಿದ್ದರು.
ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕಿ ಕುಮಾರಿ ವಿಂದುಶ್ರೀ ಕಾರ್ಯಕ್ರಮ ನಿರೂಪಿಸಿದರು.