ಇನ್ಫೋಸಿಸ್‌ ಸಹಸಂಸ್ಥಾಪಕರ ಮೇಲೆ ದಲಿತ ದೌರ್ಜನ್ಯ ಕೇಸ್‌

ಬೆಂಗಳೂರು: ಇನ್ಫೋಸಿಸ್ ಸಹಸಂಸ್ಥಾಪಕ ಕ್ರಿಸ್ ಗೋಪಾಲಕೃಷ್ಣನ್, ಐಐಎಸ್‌ಸಿ ಮಾಜಿ ನಿರ್ದೇಶಕ ಬಲರಾಮ್ ಸೇರಿದಂತೆ 18 ಮಂದಿ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಬೆಂಗಳೂರಿನ 71ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ನಿರ್ದೇಶನದ ಮೇರೆಗೆ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಬೋವಿ ಸಮುದಾಯಕ್ಕೆ ಸೇರಿದ ದೂರುದಾರ ದುರ್ಗಪ್ಪ ಭಾರತೀಯ ವಿಜ್ಞಾನ ಸಂಸ್ಥೆಯ ಸುಸ್ಥಿರ ತಂತ್ರಜ್ಞಾನ ಕೇಂದ್ರದಲ್ಲಿ ಪ್ರಾಧ್ಯಾಪಕರಾಗಿದ್ದರು. 201 ರಲ್ಲಿ ತನ್ನನ್ನು ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿಸಿ ವಜಾ ಮಾಡಲಾಗಿದೆ. ಕ್ರಿಸ್ ಗೋಪಾಲಕೃಷ್ಣನ್ ಸೇರಿ 18 ಮಂದಿ 2008ರಿಂದ 2025ರ ವರೆಗೆ ಜಾತಿನಿಂದನೆ ದೌರ್ಜನ್ಯ ನಡೆಸುತ್ತಾ ಬಂದಿದ್ದಾರೆ ಎಂದು ದೂರು ನೀಡಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋವಿಂದನ್ ರಂಗರಾಜನ್, ರಂಗರಾಜನ್ ಶ್ರೀಧರ್ ವಾರಿಯರ್, ಸಂಧ್ಯಾ ವಿಶ್ವೇಶ್ವರಯ್ಯ, ಹರಿ ಕೆವಿಎಸ್, ದಾಸಪ್ಪ, ಹೇಮಲತಾ ಮಹಿತಿ, ಚಟ್ಟೋಪಾಧ್ಯಾಯ ಕೆ. ಪ್ರದೀಪ್, ಡಿ.ಸಾವರ್ ಮತ್ತು ಮನೋಹರನ್ ಮತ್ತಿತರರನ್ನು ಆರೋಪಿಗಳಾಗಿ ಹೆಸರಿಸಲಾಗಿದೆ. ಕ್ರಿಸ್ ಗೋಪಾಲಕೃಷ್ಣನ್ ಅವರು ಐಎಸ್‌ಸಿಯ ಟ್ರಸ್ಟಿ ಬೋರ್ಡ್‌ ಸದಸ್ಯರಾಗಿರುವ ಕಾರಣ ಅವರ ಮೇಲೂ ಕೇಸ್‌ ದಾಖಲಾಗಿದೆ.































 
 

Leave a Comment

Your email address will not be published. Required fields are marked *

This site uses Akismet to reduce spam. Learn how your comment data is processed.

error: Content is protected !!
Scroll to Top