ಪೊಲೀಸರು ಜಪ್ತಿ ಮಾಡಿ ಮೈದಾನದಲ್ಲಿಟ್ಟಿದ್ದ ವಾಹನಗಳಿಗೆ ಹತ್ತಿಕೊಂಡ ಬೆಂಕಿ
ಬೆಂಗಳೂರು: ಬೆಂಗಳೂರಿನಲ್ಲಿ ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ 50ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ.
ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್ನಲ್ಲಿ ಪಾರ್ಕ್ ಮಾಡಿದ್ದರು. ಈ ಜಾಗಕ್ಕೆ ಇಂದು ಬೆಳಗ್ಗೆ ಬೆಂಕಿ ಬಿದ್ದಿದೆ. ಐದು ಕಾರು, ಐದು ಆಟೋ, 50 ಕ್ಕೂ ಹೆಚ್ಚು ಬೈಕ್ಗಳು ಸುಟ್ಟು ಹೋಗಿವೆ. ಮತ್ತಷ್ಟು ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದು ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ನಂದಿಸುವ ಕೆಲಸ ಮಾಡುತ್ತಿವೆ. ಮೈದಾನದಲ್ಲಿ ಹುಲ್ಲು, ಗಿಡ ಬೆಳೆದುಕೊಂಡಿತ್ತು. ಇಂದು ಯಾರೋ ಸಿಗರೇಟಟ್ಗೆ ಬೆಂಕಿ ಕಡ್ಡಿ ಗೀರಿ ಎಸೆದು ಹೋಗಿದ್ದರಿಂದ ಈ ಅವಘಡ ಸಂಬವಿಸಿರಬಹುದು ಎಂದು ಶಂಕಿಸಲಾಗಿದೆ.