ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಮೂಲವಿಜ್ಞಾನ ಮತ್ತು ಮಾನವಿಕ ಶಾಸ್ತ್ರ ವಿಭಾಗದ ಆಶ್ರಯದಲ್ಲಿ ಅಧ್ಯಾಪಕ ಮಾರ್ಗದರ್ಶಕರಿಗೆ ಉತ್ತಮ ಬೋಧನಾ ಮತ್ತು ಕಲಿಕಾ ಅಭ್ಯಾಸಗಳು ಎನ್ನುವ ವಿಷಯದ ಬಗ್ಗೆ ಫೆ.5 ರಿಂದ 7ರ ವರೆಗೆ ಅಧ್ಯಾಪಕರ ಕೌಶಲಾಭಿವೃದ್ಧಿ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.
ಬೋಧಕರಲ್ಲಿ ನವೀನ ಶಿಕ್ಷಣ ಕೌಶಲ್ಯಗಳನ್ನು ಹೆಚ್ಚಿಸುವುದು, ಉತ್ತಮ ಬೋಧನಾ ಪದ್ದತಿಗಳನ್ನು ಅಳವಡಿಸುವ ಮೂಲಕ ಫಲಿತಾಂಶ ಅಧಾರಿತ ಶಿಕ್ಷಣದ ಪರಿಷ್ಕರಣೆ, ಪರಿಣಾಮಕಾರಿ ಮಾರ್ಗದರ್ಶನ ಕೌಶಲಗಳನ್ನು ಅಳವಡಿಸುವುದು, ಸಂವಾದಾತ್ಮಕ ಬೋಧನೆಗಾಗಿ ಡಿಜಿಟಲ್ ಉಪಕರಣಗಳು ಮತ್ತು ತಂತ್ರಜ್ಞಾನದ ಬಳಕೆ ಮತ್ತು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗಾಗಿ ಉತ್ತಮ ಅಭ್ಯಾಸಗಳನ್ನು ಉತ್ತೇಜಿಸುವುದು ಇದೇ ಮುಂತಾದ ವಿಷಯಗಳ ಬಗ್ಗೆ ಪದವಿಪೂರ್ವ, ಪದವಿ, ಇಂಜಿನಿಯರಿಂಗ್, ಬಿ.ಎಡ್ ಉಪನ್ಯಾಸಕರಿಗೆ ಮತ್ತು ಪ್ರೌಢ ಶಾಲಾ ಶಿಕ್ಷಕರಿಗೆ ಮಾಹಿತಿಯನ್ನು ನೀಡುವ ಉದ್ದೇಶದಿಂದ ಕಾರ್ಯಾಗಾರ ಆಯೋಜಿಸಲಾಗಿದೆ.
ಕಾಲೇಜಿನ ಶ್ರೀರಾಮ ಸಭಾ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು ರಾಜ್ಯಾದ್ಯಂತ ವಿವಿಧ ಕಾಲೇಜುಗಳ ಪ್ರಾಧ್ಯಾಪಕರು ಮತ್ತು ಪ್ರೌಢ ಶಾಲಾ ಶಿಕ್ಷಕರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.
ಫೆ.5 ರಂದು ಬೆಳಿಗ್ಗೆ 9.30 ಕ್ಕೆ ಮಂಗಳೂರು ವಿಶ್ವವಿದ್ಯಾನಿಲಯದ ಇಂಡಸ್ಟ್ರಿಯಲ್ ಕೆಮಿಸ್ಟ್ರಿ ವಿಭಾಗದ ಪ್ರೊಫೆಸರ್ ಡಾ.ಸರೋಜಿನಿ.ಬಿ.ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದು, ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್.ಬಿ. ಅಧ್ಯಕ್ಷತೆ ವಹಿಸುವರು. ಫೆ.7 ರಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಎಂಐಟಿ ಮಣಿಪಾಲದ ಅಸೋಸಿಯೇಟ್ ಪ್ರೊಫೆಸರ್ ಡಾ.ಮಹೇಶ.ಎಂ.ಜಿ ಸಮಾರೋಪ ನುಡಿಗಳನ್ನಾಡಲಿದ್ದಾರೆ. ಕಾಲೇಜು ಆಡಳಿತ ಮಂಡಳಿ ನಿರ್ದೇಶಕಿ ವಿದ್ಯಾ.ಆರ್.ಗೌರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಎಂಐಟಿ ಮಣಿಪಾಲದ ಡಾ.ಮಹೇಶ.ಎಂ.ಜಿ, ಎಸ್‌ಜೆಇಸಿ ಮಂಗಳೂರಿನ ಡಾ.ವಿಜಯ್.ವಿ.ಎಸ್, ವಿವೇಕಾನಂದ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಮಾಧವ ಭಟ್.ಎಚ್, ದೇರಳಕಟ್ಟೆಯ ಯೇನಪೋಯ ಮೆಡಿಕಲ್ ಕಾಲೇಜಿನ ಡಾ.ರವಿಚಂದ್ರ.ಎಸ್.ಕಾರ್ಕಳ್, ಆರ್ಟ್ ಆಫ್ ಲಿವಿಂಗ್‌ನ ತರಬೇತುಗಾರ್ತಿ ಶರಾವತಿ ರವಿನಾರಾಯಣ, ಆಪ್ತ ಸಲಹೆಗಾರ್ತಿ ಪ್ರೀತಿ ಶೆಣೈ, ವಿಸಿಇಟಿ ಪುತ್ತೂರಿನ ಎಲೆಕ್ಟ್ರಾನಿಕ್ಸ್ ವಿಭಾಗದ ಡಾ.ಮಹಾಂತೇಶ್ ಚೌಧರಿ ಮತ್ತು ಎಐಎಂಎಲ್ ವಿಭಾಗ ಮುಖ್ಯಸ್ಥ ಡಾ.ಗೋವಿಂದರಾಜ್.ಪಿ ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಕಾಲೇಜಿನ ಮೂಲವಿಜ್ಞಾನ ವಿಭಾಗ ಮುಖ್ಯಸ್ಥ ಪ್ರೊ.ರಮಾನಂದ ಕಾಮತ್ ಅವರ ಮುಂದಾಳುತ್ವದಲ್ಲಿ ನಡೆಯುವ ಈ ಕಾರ್ಯಾಗಾರದ ಹೆಚ್ಚಿನ ಮಾಹಿತಿಗೆ ಕಾರ್ಯಕ್ರಮ ಸಂಯೋಜಕಿ ಡಾ.ಶ್ವೇತಾಂಬಿಕ.ಪಿ 9449215221 ಅಥವಾ ಪ್ರೊ.ಲತಾ ಮೋಹನ್ ಶೆಟ್ಟಿ 9164609576 ಅವರನ್ನು ಸಂಪರ್ಕಿಸಬಹುದು ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ತಿಳಿಸಿದ್ದಾರೆ.