ಪುತ್ತೂರು: ಪುತ್ತೂರಿನ ಚಿರಪರಿಚಿತ, ವೈದ್ಯ ಲೋಕದ ಕಂಪೌಂಡರ್ ಹಾರಾಡಿ ನಿವಾಸಿ ಕಂಪೌಂಡರ್ ನರಸಿಂಹ ಭಟ್ (82) ಅವರು ಸೋಮವಾರ ರಾತ್ರಿ ನಿಧನರಾದರು.
ಪುತ್ತೂರಿನ ಚಿಕಿತ್ಸಾಲಯವೊಂದರಲ್ಲಿ ಕಾಂಪೌಂಡರ್ ಆಗಿ 68 ವರ್ಷ ಸೇವೆ ಸಲ್ಲಿಸಿದ ನರಸಿಂಹ ಭಟ್ ನಿವೃತ್ತಿಗೊಂಡು ಮನೆಯಲ್ಲಿದ್ದರು.
ಡಾ.ಶಿವರಾಮ ಭಟ್ ಜೊತೆ ಕಾಂಪೌಂಡರ್ ಆಗಿ ಕೆಲಸ ಮಾಡಿದ ನರಸಿಂಹ ಭಟ್ ಅವರು ಎಲ್ಲರಿಗೂ ಚಿರಪರಿಚಿತರು. ಮೃತರು ಪತ್ನಿ ಕಾವೇರಮ್ಮ, ಪುತ್ರ ವಿದೇಶದಲ್ಲಿರುವ ಕಾರ್ತಿಕ್, ಇಬ್ಬರು ಸಹೋದರರನ್ನು ಅಗಲಿದ್ದಾರೆ