ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯಿತಿನ ಗ್ರಂಥಾಲಯ ಸಲಹಾ ಸಮಿತಿಯ ಮೊದಲ ಸಭೆಯು ಫೆ. 3ರಂದು ಗ್ರಾಮ ಪಂಚಾಯತಿ ಅಧ್ಯಕ್ಷರಾದ ದಿವಾಕರ ಮೆದಿನರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಸಭಾಂಗಣದಲ್ಲಿ ಜರಗಿತು.
ಪಂಚಾಯತ್ ಕಾರ್ಯದರ್ಶಿ ಕುಂಞ ಕೆ ಅವರು ಸ್ವಾಗತಿಸಿ ಸಭೆಯನ್ನು ಉದ್ದೇಶಸಿ ಮಾತನಾಡಿದರು.
ಗ್ರಂಥಾಲಯದ ಮೇಲ್ವಿಚಾರಕರಾದ ಪ್ರಮೀಳಾ.ಪಿ ಗ್ರಂಥಾಲಯದಲ್ಲಿರುವ ಸೌಲಭ್ಯಗಳು ಮತ್ತು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಪಡೆಯುತ್ತಿರುವ ಸೌಲಭ್ಯಗಳ ಮಾಹಿತಿಯನ್ನು ನೀಡಿದ್ದು, ಗ್ರಂಥಾಲಯಕ್ಕೆ ಮೇಜುಗಳ ವ್ಯವಸ್ಥೆ, ಪುಸ್ತಕಗಳನ್ನು ಜೋಡಿಸಿ ಇಡಲು ಕವಾಟುಗಳು, ಪ್ರಿಂಟರ್, ಕಂಪ್ಯೂಟರ್ ದುರಸ್ತಿ ಆಗಬೇಕೆಂದು ಸಭೆಯ ಗಮನಕ್ಕೆ ತಂದರು. ಗ್ರಂಥಾಲಯವು ಸಮರ್ಪಕವಾಗಿ ಸೇವೆ ನಿರ್ವಹಿಸಲು ಪ್ರತ್ಯೇಕ ಗ್ರಂಥಾಲಯ ಕೊಠಡಿಯ ಅಗತ್ಯವಿದೆಯೆಂದು ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಗ್ರಾಮ ಪಂಚಾಯತ್ ಅಧ್ಯಕ್ಷರು ಮಾತನಾಡಿ, ಗ್ರಂಥಾಲಯ ಕೊಠಡಿಯ ನಿರ್ಮಾಣಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು. ಪ್ರತ್ಯೇಕ ಕೊಠಡಿ ನಿರ್ಮಾಣ ಆಗುವವರೆಗೆ ಪಂಚಾಯಿತಿ ವತಿಯಿಂದ ಕೊಠಡಿಯ ವ್ಯವಸ್ಥೆಯನ್ನು ಮಾಡಬೇಕೆಂದು ಸಮಿತಿ ಸದಸ್ಯರಾದ ಕೇಶವ ಪೂಜಾರಿ ನಾಳರವರಿಗೆ ಸಲಹೆ ನೀಡಿದರು.
ಸಭೆಯಲ್ಲಿ ಸಲಹಾ ಸಮಿತಿಯ ಸದಸ್ಯ ದಿವಾಕರ ಆಚಾರ್ಯ ಗೇರುಕಟ್ಟೆ, ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪ ಪ್ರಾಂಶುಪಾಲೆ ಈಶ್ವರಿ.ಕೆ, ಶರತ್ ಕುಮಾರ್, ದೇವಕಿ ಮರ್ತೋಟ್ಟು, ಶ್ರೀಮತಿ ಪ್ರಜ್ಞಾ ಉಪಸ್ಥಿತರಿದ್ದರು.
ಪಂಚಾಯತಿ ಸಿಬ್ಬಂದಿ ಸಹಕರಿಸಿದರು. ಪಂಚಾಯತ್ ಕಾರ್ಯದರ್ಶಿಯವರು ವಂದಿಸಿದರು.